Home Crime ಶಿಕಾರಿಪುರ:’ಖಾತೆ ಬದಲಾವಣೆಗೆ ₹1 ಲಕ್ಷ ಲಂಚ’, ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಮ ಲೆಕ್ಕಾಧಿಕಾರಿ’
CrimeShivamogga NewsTaluk News

ಶಿಕಾರಿಪುರ:’ಖಾತೆ ಬದಲಾವಣೆಗೆ ₹1 ಲಕ್ಷ ಲಂಚ’, ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಮ ಲೆಕ್ಕಾಧಿಕಾರಿ’

Share
Share

ಶಿಕಾರಿಪುರ:’ಜಮೀನಿನ ಖಾತೆ ಬದಲಾವಣೆ ಮಾಡಿಕೊಡುವುದಾಗಿ ಹೇಳಿ ₹1 ಲಕ್ಷ ಲಂಚ ಸ್ವೀಕರಿಸುತ್ತಿದ್ದ ಚಿಕ್ಕಜಂಬೂರು ಗ್ರಾಮ ಲೆಕ್ಕಾಧಿಕಾರಿ (ವಿಎ) ವಿಠ್ಠಲ ಕೋಲಾರ ಅವರನ್ನು ಲೋಕಾಯುಕ್ತ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.’

‘ಪಟ್ಟಣದ ಸರ್ಕಾರಿ ನೌಕರರ ಕ್ಯಾಂಟೀನ್‌ನಲ್ಲಿ ಲಂಚದ ಹಣ ಪಡೆಯುವ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದುಕೊಂಡರು. ವಿಚಾರಣೆ ಬಳಿಕ ಅವರನ್ನು ಬಂಧಿಸಲಾಗಿದೆ.’

‘ಚಿಕ್ಕಜಂಬೂರು ಗ್ರಾಮದ ಜಿಕ್ರಿಯಾ ಬೇಗ್ ಅವರು ತಮ್ಮ ತಂದೆಯ ವಿಲ್‌ಪತ್ರ (ಉಯಿಲು) ಆಧಾರದಲ್ಲಿ ಜಮೀನಿನ ಖಾತೆ ಬದಲಾವಣೆಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸಿದ್ದರು. ಈ ಪ್ರಕ್ರಿಯೆ ಪೂರ್ಣಗೊಳಿಸಲು ವಿಠ್ಠಲ ಕೋಲಾರ ಅವರು ₹4 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂಬ ಆರೋಪ ಕೇಳಿಬಂದಿದೆ.’

‘ಬಳಿಕ ಮೊದಲ ಕಂತಾಗಿ ₹1 ಲಕ್ಷವನ್ನು ಸರ್ಕಾರಿ ನೌಕರರ ಕ್ಯಾಂಟೀನ್‌ನಲ್ಲಿ ನೀಡುವಂತೆ ಸೂಚನೆ ನೀಡಿದ್ದರು ಎನ್ನಲಾಗಿದೆ. ಲಂಚ ಬೇಡಿಕೆ ಹಿನ್ನೆಲೆಯಲ್ಲಿ ಜಿಕ್ರಿಯಾ ಬೇಗ್ ಅವರು ಲೋಕಾಯುಕ್ತರಿಗೆ ದೂರು ಸಲ್ಲಿಸಿದ್ದರು.

ದೂರಿನ ಆಧಾರದ ಮೇಲೆ ಲೋಕಾಯುಕ್ತ ಡಿವೈಎಸ್‌ಪಿ ಚಂದ್ರಶೇಖರ್ ಅವರ ನೇತೃತ್ವದಲ್ಲಿ ಇನ್‌ಸ್ಪೆಕ್ಟರ್ ಮೈಲಾರ ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಲೆಗೆ ಬೀಳಿಸಿದ್ದಾರೆ. ಪ್ರಕರಣ ಸಂಬಂಧ ಮುಂದಿನ ತನಿಖೆ ನಡೆಯುತ್ತಿದೆ.’

📢 ನಿಮ್ಮೂರ ಸುದ್ದಿಗಳನ್ನು ಇಮೇಲ್ ಮಾಡಿ

shivamoggaherald@gmail.com ಅಥವಾ ವಾಟ್ಸಾಪ್ ಸಂಖ್ಯೆಗೆ ಕಳುಹಿಸಿ ಕೊಡಿ.

📞 9113834502

ನೀವು ಇನ್ನೂ 'ಶಿವಮೊಗ್ಗ ಹೆರಾಲ್ಡ್' ವಾಟ್ಸಾಪ್ ಗುಂಪು ಸೇರಿಲ್ವ?

✅ ಈಗಲೇ ವಾಟ್ಸಾಪ್ ಗುಂಪು ಸೇರಿ

'Facebook' ನಲ್ಲಿ ಸುದ್ದಿ ಓದಲು ಈ ಲಿಂಕ್ ಕ್ಲಿಕ್ ಮಾಡಿ

👍 Facebook ನಲ್ಲಿ ಫಾಲೋ ಮಾಡಿ
Share
Written by
Shivamogga herald

'ಮಾಧ್ಯಮಗಳು ಸುಳ್ಳು ಸುದ್ದಿ ನಿಪುಣತೆಯಲ್ಲಿ ಮುಂಚೂಣಿಯಲ್ಲಿವೆ.' ಪತ್ರಕರ್ತರು ಪೂರಕ ಮಾಹಿತಿಯನ್ನು ಸಂಪಾದಿಸದೆ, ಅರೆಬರೆ ಬೆಂದ ಸುದ್ದಿಯ ಮಾಹಿತಿಯನ್ನು ಸಮಾಜಕ್ಕೆ ಹಂಚುವ ಮೂಲಕ ತಪ್ಪು ಸಂದೇಶ ನೀಡುತ್ತಿದ್ದಾರೆ. ಇದು ಸರಿಯಾದ ನಿಲುವಲ್ಲ'- ಹೀಗೊಂದು ಅಪವಾದ ಪತ್ರಕರ್ತರು ಹಾಗೂ ಪತ್ರಿಕೋದ್ಯಮದ ಮೇಲಿದೆ. ಆದ್ದರಿಂದ, ಇಲ್ಲಿ ನಮ್ಮ ಸ್ವಂತ ಅಭಿಪ್ರಾಯಗಳಿಗೆ ಸ್ಥಾನ ನೀಡಲು ಇಚ್ಛಿಸುವುದಿಲ್ಲ. ಓದುಗರಿಗೆ ಸತ್ಯ ಹಾಗೂ ನಿಖರತೆಯ ಸುದ್ದಿಯೊಂದಿಗೆ ಸುದ್ದಿಯಾಗಿ ಮಾತ್ರ ಕೊಡಲು ಬಯಸುತ್ತೇವೆ. ಇದೊಂದು ಮೈಲಿ ಗಲ್ಲು ಸಮಾಜವನ್ನು ಎಚ್ಚರಿಸುವ ಹಾಗೂ ಸಮ ಸಮಾಜ ಕಟ್ಟುವ ಕಾರ್ಯಕ್ಕೆ ಅಡಿಪಾಯ ಆಗಲಿದೆ ಎನ್ನುವ ವಿಶ್ವಾಸದೊಂದಿಗೆ 'ಶಿವಮೊಗ್ಗ ಹೆರಾಲ್ಡ್' ಡಿಜಿಟಲ್ ಮಾಧ್ಯಮ ಕಟ್ಟಿದ್ದೇವೆ. ಸ್ಥಳೀಯ ಸುದ್ದಿಗಳಿಗೆ ನಮ್ಮ ಮೊದಲ ಆದ್ಯತೆ. ಮಾಹಿತಿ ಹಾಗೂ ಸಲಹೆಗೆ ದೂರವಾಣಿ/ ವಾಟ್ಸಾಪ್ ಸಂಖ್ಯೆ: 9113834502, 8197788460 ಸಂಪರ್ಕಿಸಬಹುದು.

Leave a comment

Leave a Reply

Your email address will not be published. Required fields are marked *