ಶಿವಮೊಗ್ಗ: ಶಾಲಾ ಕಟ್ಟಡಕ್ಕೆ ಅಗ್ನಿಶಾಮಕ ದಳದ ನಿರಾಕ್ಷೇಪಣಾ ಪತ್ರ (ಎನ್‌ಒಸಿ) ನೀಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟ ಆರೋಪದ ಮೇಲೆ ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಅಶೋಕ್ ಕುಮಾರ್ ಅವರನ್ನು ಲೋಕಾಯುಕ್ತ ಪೊಲೀಸರು ಗುರುವಾರ ಟ್ರ್ಯಾಪ್ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದರು.
ಶಿಕಾರಿಪುರ ಪಟ್ಟಣದ ಶಾಲೆಯೊಂದರ ನೂತನ ಕಟ್ಟಡಕ್ಕೆ ಎನ್‌ಒಸಿ ಪಡೆಯಲು ದೂರುದಾರ ಅನೂಪ್ ಮುಂದಾಗಿದ್ದರು. ಎನ್‌ಒಸಿ ನೀಡಲು ಅಶೋಕ್ ಕುಮಾರ್ ಅವರು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.
ಈ ಕುರಿತು ಅನೂಪ್ ಅವರು ಶಿವಮೊಗ್ಗ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಕಾರ್ಯಾಚರಣೆ ರೂಪಿಸಿದ ಪೊಲೀಸರು, ದೂರುದಾರರಿಂದ ಹಣ ಸ್ವೀಕರಿಸುತ್ತಿದ್ದ ವೇಳೆ ಅಶೋಕ್ ಕುಮಾರ್ ಅವರನ್ನು ವಶಕ್ಕೆ ಪಡೆದರು.
ಲೋಕಾಯುಕ್ತ ಡಿವೈಎಸ್ಪಿ ಚಂದ್ರಶೇಖರ್ ಬಿ.ಪಿ. ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಇನ್‌ಸ್ಪೆಕ್ಟರ್‌ಗಳಾದ ವೀರಬಸಪ್ಪ, ರುದ್ರೇಶ್ ಸೇರಿದಂತೆ ಸಿಬ್ಬಂದಿ ಪಾಲ್ಗೊಂಡಿದ್ದರು.
ಅಶೋಕ್ ಕುಮಾರ್ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಲೋಕಾಯುಕ್ತ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
📢 ನಿಮ್ಮೂರ ಸುದ್ದಿಗಳನ್ನು ಇಮೇಲ್ ಮಾಡಿ
shivamoggaherald@gmail.com ಅಥವಾ ವಾಟ್ಸಾಪ್ ಸಂಖ್ಯೆಗೆ ಕಳುಹಿಸಿ ಕೊಡಿ.
ನೀವು ಇನ್ನೂ 'ಶಿವಮೊಗ್ಗ ಹೆರಾಲ್ಡ್' ವಾಟ್ಸಾಪ್ ಗುಂಪು ಸೇರಿಲ್ವ?
✅ ಈಗಲೇ ವಾಟ್ಸಾಪ್ ಗುಂಪು ಸೇರಿ'Facebook' ನಲ್ಲಿ ಸುದ್ದಿ ಓದಲು ಈ ಲಿಂಕ್ ಕ್ಲಿಕ್ ಮಾಡಿ
👍 Facebook ನಲ್ಲಿ ಫಾಲೋ ಮಾಡಿ- Bribe
- Bribe Case
- Bribery Case
- Corruption
- Corruption Case
- Fire Department
- Fire Officer
- Karnataka Lokayukta
- Lokayukta
- Lokayukta Trap
- NOC
- Shivamogga
- Shivamogga news
- Shivamogga News ಶಿವಮೊಗ್ಗ
- ಅಗ್ನಿಶಾಮಕ ಅಧಿಕಾರಿ
- ಅಗ್ನಿಶಾಮಕ ಇಲಾಖೆ
- ಎನ್‌ಒಸಿ
- ಕರ್ನಾಟಕ ಲೋಕಾಯುಕ್ತ
- ಭ್ರಷ್ಟಾಚಾರ
- ಲಂಚ
- ಲಂಚ ಪ್ರಕರಣ
- ಲೋಕಾಯುಕ್ತ
- ಶಿವಮೊಗ್ಗ ಸುದ್ದಿ
- ₹1 Lakh Bribe
- ₹1 ಲಕ್ಷ ಲಂಚ
Leave a comment