Home Shivamogga News ಬಿ. ವರಲಕ್ಷ್ಮಿ ಪ್ರಕಾಶ್ ಗೆ ಪಂಚರತ್ನ ಪ್ರಶಸ್ತಿ
Shivamogga News

ಬಿ. ವರಲಕ್ಷ್ಮಿ ಪ್ರಕಾಶ್ ಗೆ ಪಂಚರತ್ನ ಪ್ರಶಸ್ತಿ

Share
Share

ಶಿವಮೊಗ್ಗ: ವಿಜಯಲಕ್ಷ್ಮಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಬೆಂಗಳೂರಿನಲ್ಲಿ ನವೆಂಬರ್ 23ರ ಭಾನುವಾರ ನಡೆದ ಸಮಾರಂಭದಲ್ಲಿ ಬಿ. ವರಲಕ್ಷ್ಮಿ ಪ್ರಕಾಶ್ ಇವರಿಗೆ ಪಂಚರತ್ನ ಪ್ರಶಸ್ತಿ ನೀಡಿ ಪುರಸ್ಕರಿಸಲಾಯಿತು.

ಇವರು ಈ ಹಿಂದೆ ಪರಿಪೂರ್ಣ ಪ್ರತಿಷ್ಠಾನ ಫೌಂಡೇಶನ್, ಕರ್ನಾಟಕ ನೇತಾಜಿ ಚಾರಿಟೇಬಲ್ ಟ್ರಸ್ಟ್ ನಿಂದ ಬೆಂಗಳೂರಿನಲ್ಲಿ ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ ಅವರಿಂದ ವೀರ ವನಿತೆ ರಾಣಿ ಚೆನ್ನಮ್ಮ ರಾಜ್ಯ ಪ್ರಶಸ್ತಿ ಪುರಸ್ಕೃತರಾಗಿದ್ದರು.
ಕಳೆದ ಜೂನ್ ನಲ್ಲಿ ಚಿತ್ರದುರ್ಗದಲ್ಲಿ ಕಲ್ಯಾಣ ಕರ್ನಾಟಕ ವೇದಿಕೆ ವತಿಯಿಂದ ನೀಡಲ್ಪಡುವ ದುರ್ಗದ ಸಿರಿ ಕಲಾ ವೈಭವ ರಾಜ್ಯ ಪ್ರಶಸ್ತಿಗೆ ಭಾಜನರಾಗಿದ್ದರು. ವರಲಕ್ಷ್ಮಿ ಇವರು ರಾಜಕೀಯ, ಸಾಮಾಜಿಕ, ಶೈಕ್ಷಣಿಕ, ಧಾರ್ಮಿಕ, ಕ್ರೀಡೆ ಹೀಗೆ ವಿವಿಧ ಕ್ಷೇತ್ರಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.
ತೀರ್ಥಹಳ್ಳಿ ಸ್ತ್ರೀ ಶಕ್ತಿ ತಾಲೂಕು ಒಕ್ಕೂಟದ ಖಜಾಂಚಿ, ಜಿಲ್ಲಾ ಧಾರ್ಮಿಕ ದತ್ತಿ ಇಲಾಖೆಯ ಧಾರ್ಮಿಕ ಪರಿಷತ್ತಿನ ಸದಸ್ಯೆ, ತಾಲೂಕು ಕನ್ನಡ ಸಾಹಿತ್ಯ ಪರಿಷತ್, ಅಹಿಂದಾ ಸಂಘಟನೆಯ ಜಿಲ್ಲಾ ಕಾರ್ಯದರ್ಶಿ, ಮಾನವ ಬಂಧುತ್ವ ವೇದಿಕೆಯ ಅಧ್ಯಕ್ಷೆಯಾಗಿದ್ದು ವಿವಿಧ ಸಂಘ, ಸಂಸ್ಥೆಗಳಲ್ಲಿ ಗುರುತಿಸಿಕೊಂಡಿದ್ದಾರೆ.

📢 ನಿಮ್ಮೂರ ಸುದ್ದಿಗಳನ್ನು ಇಮೇಲ್ ಮಾಡಿ

shivamoggaherald@gmail.com ಅಥವಾ ವಾಟ್ಸಾಪ್ ಸಂಖ್ಯೆಗೆ ಕಳುಹಿಸಿ ಕೊಡಿ.

📞 9113834502

ನೀವು ಇನ್ನೂ 'ಶಿವಮೊಗ್ಗ ಹೆರಾಲ್ಡ್' ವಾಟ್ಸಾಪ್ ಗುಂಪು ಸೇರಿಲ್ವ?

✅ ಈಗಲೇ ವಾಟ್ಸಾಪ್ ಗುಂಪು ಸೇರಿ

'Facebook' ನಲ್ಲಿ ಸುದ್ದಿ ಓದಲು ಈ ಲಿಂಕ್ ಕ್ಲಿಕ್ ಮಾಡಿ

👍 Facebook ನಲ್ಲಿ ಫಾಲೋ ಮಾಡಿ
Share
Written by
Shivamogga herald

'ಮಾಧ್ಯಮಗಳು ಸುಳ್ಳು ಸುದ್ದಿ ನಿಪುಣತೆಯಲ್ಲಿ ಮುಂಚೂಣಿಯಲ್ಲಿವೆ.' ಪತ್ರಕರ್ತರು ಪೂರಕ ಮಾಹಿತಿಯನ್ನು ಸಂಪಾದಿಸದೆ, ಅರೆಬರೆ ಬೆಂದ ಸುದ್ದಿಯ ಮಾಹಿತಿಯನ್ನು ಸಮಾಜಕ್ಕೆ ಹಂಚುವ ಮೂಲಕ ತಪ್ಪು ಸಂದೇಶ ನೀಡುತ್ತಿದ್ದಾರೆ. ಇದು ಸರಿಯಾದ ನಿಲುವಲ್ಲ'- ಹೀಗೊಂದು ಅಪವಾದ ಪತ್ರಕರ್ತರು ಹಾಗೂ ಪತ್ರಿಕೋದ್ಯಮದ ಮೇಲಿದೆ. ಆದ್ದರಿಂದ, ಇಲ್ಲಿ ನಮ್ಮ ಸ್ವಂತ ಅಭಿಪ್ರಾಯಗಳಿಗೆ ಸ್ಥಾನ ನೀಡಲು ಇಚ್ಛಿಸುವುದಿಲ್ಲ. ಓದುಗರಿಗೆ ಸತ್ಯ ಹಾಗೂ ನಿಖರತೆಯ ಸುದ್ದಿಯೊಂದಿಗೆ ಸುದ್ದಿಯಾಗಿ ಮಾತ್ರ ಕೊಡಲು ಬಯಸುತ್ತೇವೆ. ಇದೊಂದು ಮೈಲಿ ಗಲ್ಲು ಸಮಾಜವನ್ನು ಎಚ್ಚರಿಸುವ ಹಾಗೂ ಸಮ ಸಮಾಜ ಕಟ್ಟುವ ಕಾರ್ಯಕ್ಕೆ ಅಡಿಪಾಯ ಆಗಲಿದೆ ಎನ್ನುವ ವಿಶ್ವಾಸದೊಂದಿಗೆ 'ಶಿವಮೊಗ್ಗ ಹೆರಾಲ್ಡ್' ಡಿಜಿಟಲ್ ಮಾಧ್ಯಮ ಕಟ್ಟಿದ್ದೇವೆ. ಸ್ಥಳೀಯ ಸುದ್ದಿಗಳಿಗೆ ನಮ್ಮ ಮೊದಲ ಆದ್ಯತೆ. ಮಾಹಿತಿ ಹಾಗೂ ಸಲಹೆಗೆ ದೂರವಾಣಿ/ ವಾಟ್ಸಾಪ್ ಸಂಖ್ಯೆ: 9113834502, 8197788460 ಸಂಪರ್ಕಿಸಬಹುದು.

Leave a comment

Leave a Reply

Your email address will not be published. Required fields are marked *