ಶಿವಮೊಗ್ಗ: ಸಾರಿಗೆ ಇಲಾಖೆಯಲ್ಲಿ ವಾಹನಗಳ ಸಂಚಾರ ನಿಯಮ (Traffic Violations) ಉಲ್ಲಂಘನೆ ಪ್ರಕರಣಗಳನ್ನು ಶೇ 50ರಷ್ಟು ದಂಡ ಪಾವತಿಸಿ ಇತ್ಯರ್ಥಪಡಿಸಿಕೊಳ್ಳಲು ಸರ್ಕಾರ ಅವಕಾಶ ಕಲ್ಪಿಸಿದೆ. ವಾಹನ ಮಾಲೀಕರು ತಮ್ಮ ವಾಹನದ ವಿರುದ್ಧ ದಾಖಲಾಗಿರುವ ಪ್ರಕರಣ ಸಂಬಂಧ ದಂಡ ಮೊತ್ತದ ಅರ್ಧದಷ್ಟು ಪಾವತಿ ಮಾಡಬಹುದು.
990-91 ರಿಂದ 2019-20 ರೊಳಗೆ ಪ್ರಾದೇಶಿಕ ಸಾರಿಗೆ ಕಚೇರಿ (ಆರ್.ಟಿ.ಒ) ಅಧಿಕಾರಿಗಳು ದಾಖಲಿಸಿರುವ ಪ್ರಕರಣಗಳು ಮಾತ್ರ ಶೇ 50 ರಷ್ಟು ದಂಡ ಪಾವತಿ ರಿಯಾಯಿತಿ ವ್ಯಾಪ್ತಿಗೆ ಒಳಪಡುತ್ತವೆ. ಜಿಲ್ಲಾ ವ್ಯಾಪ್ತಿಯಲ್ಲಿ ಸದರಿ ಅವಧಿಯಲ್ಲಿ 790 ಪ್ರಕರಣಗಳು ಇತ್ಯರ್ಥಕ್ಕೆ ಬಾಕಿಯಿದ್ದು, ಸಂಬಂಧಪಟ್ಟ ವಾಹನ ಮಾಲೀಕರು ಡಿ.12 ರೊಳಗೆ ರಿಯಾಯಿತಿ ಬಳಸಿಕೊಂಡು ದಂಡ ಪಾವತಿಸಿ ಪ್ರಕರಣ ಮುಕ್ತಾಯಗೊಳಿಸಿ ಕೊಳ್ಳಬಹುದು ಎಂದು ಆರ್.ಟಿ.ಒ ಅಧಿಕಾರಿ ಮುರಗೇಂದ್ರ.ಬಿ.ಶಿರೋಲ್ಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
📢 ನಿಮ್ಮೂರ ಸುದ್ದಿಗಳನ್ನು ಇಮೇಲ್ ಮಾಡಿ
shivamoggaherald@gmail.com ಅಥವಾ ವಾಟ್ಸಾಪ್ ಸಂಖ್ಯೆಗೆ ಕಳುಹಿಸಿ ಕೊಡಿ.
ನೀವು ಇನ್ನೂ 'ಶಿವಮೊಗ್ಗ ಹೆರಾಲ್ಡ್' ವಾಟ್ಸಾಪ್ ಗುಂಪು ಸೇರಿಲ್ವ?
✅ ಈಗಲೇ ವಾಟ್ಸಾಪ್ ಗುಂಪು ಸೇರಿ'Facebook' ನಲ್ಲಿ ಸುದ್ದಿ ಓದಲು ಈ ಲಿಂಕ್ ಕ್ಲಿಕ್ ಮಾಡಿ
👍 Facebook ನಲ್ಲಿ ಫಾಲೋ ಮಾಡಿ
Leave a comment