ಶಿವಮೊಗ್ಗ:’ಮಂಗನ ಕಾಯಿಲೆಯಿಂದ (ಕೆಎಫ್ ಡಿ) ತೀರ್ಥಹಳ್ಳಿ ತಾಲ್ಲೂಕಿನ ಕಟಗಾರು ಗ್ರಾಮದ 29 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.
ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವನಪ್ಪಿದ್ದು, ಜನವರಿ 20 ರಿಂದ ವ್ಯಕ್ತಿಯು ತೀವ್ರ ಜ್ವರದಿಂದ ಬಳಲುತ್ತಿದ್ದರು. ಸ್ಥಳೀಯವಾಗಿ ಚಿಕಿತ್ಸೆ ಪಡೆದರೂ ಜ್ವರದ ತೀವ್ರತೆ ಕಡಿಮೆಯಾಗಿರಲಿಲ್ಲ.
ಕಳೆದ ಭಾನುವಾರ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿಯ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಬುಧವಾರ ಕೊನೆಯುಸಿರೆಳೆದಿದ್ದಾರೆ.
ಜಿಲ್ಲಾ ಆರೋಗ್ಯ ಇಲಾಖೆಯು ಈಗಾಗಲೇ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದು, ಕಟಗಾರು ಮತ್ತು ಸುತ್ತಮುತ್ತಲ ಗ್ರಾಮಗಳಲ್ಲಿ ಜ್ವರದ ಲಕ್ಷಣವಿರುವವರ ತಪಾಸಣೆಗೆ ಸೂಚಿಸಿದೆ. ಮಂಗಗಳು ಸತ್ತಿರುವುದು ಕಂಡುಬಂದಲ್ಲಿ ಕೂಡಲೇ ಮಾಹಿತಿ ನೀಡುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಲಾಗಿದೆ. (ಕೆಎಫ್ಡಿ ಸೋಂಕಿತರ ಹೆಸರು ಬಹಿರಂಗಪಡಿಸುವಂತಿಲ್ಲ).
📢 ನಿಮ್ಮೂರ ಸುದ್ದಿಗಳನ್ನು ಇಮೇಲ್ ಮಾಡಿ
shivamoggaherald@gmail.com ಅಥವಾ ವಾಟ್ಸಾಪ್ ಸಂಖ್ಯೆಗೆ ಕಳುಹಿಸಿ ಕೊಡಿ.
ನೀವು ಇನ್ನೂ 'ಶಿವಮೊಗ್ಗ ಹೆರಾಲ್ಡ್' ವಾಟ್ಸಾಪ್ ಗುಂಪು ಸೇರಿಲ್ವ?
✅ ಈಗಲೇ ವಾಟ್ಸಾಪ್ ಗುಂಪು ಸೇರಿ'Facebook' ನಲ್ಲಿ ಸುದ್ದಿ ಓದಲು ಈ ಲಿಂಕ್ ಕ್ಲಿಕ್ ಮಾಡಿ
👍 Facebook ನಲ್ಲಿ ಫಾಲೋ ಮಾಡಿ
Leave a comment