Home ಶಿವಮೊಗ್ಗ: ಶೆಟ್ಟಿಹಳ್ಳಿ ಅಭಯಾರಣ್ಯ ʼಡಿನೋಟಿಫಿಕೇಷನ್‌ʼ ಅಂತಿಮ ಹಂತಕ್ಕೆ: ಅರಣ್ಯ ಸಚಿವ ಈಶ್ವರ್.ಬಿ ಖಂಡ್ರೆ
HomeShivamogga News

ಶಿವಮೊಗ್ಗ: ಶೆಟ್ಟಿಹಳ್ಳಿ ಅಭಯಾರಣ್ಯ ʼಡಿನೋಟಿಫಿಕೇಷನ್‌ʼ ಅಂತಿಮ ಹಂತಕ್ಕೆ: ಅರಣ್ಯ ಸಚಿವ ಈಶ್ವರ್.ಬಿ ಖಂಡ್ರೆ

Share
Share

ಶಿವಮೊಗ್ಗ: ʼಇಲ್ಲಿನ ಶೆಟ್ಟಿಹಳ್ಳಿ ಅಭಯಾರಣ್ಯ ಡಿನೋಟಿಫಿಕೇಷನ್ ಮತ್ತು ಶರಾವತಿ ಸಂತ್ರಸ್ತರಿಗೆ ಪರಿಹಾರ ಕುರಿತಾದ ತೀರ್ಮಾನಗಳು ಅಂತಿಮ ಘಟ್ಟ ತಲುಪಿವೆʼ ಎಂದು ಅರಣ್ಯ ಸಚಿವ ಈಶ್ವರ್ ಬಿ. ಖಂಡ್ರೆ ತಿಳಿಸಿದರು.

ನಗರದಲ್ಲಿ ಬುಧವಾರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು,ʼಶೆಟ್ಟಿಹಳ್ಳಿ ವನ್ಯಜೀವಿ ಧಾಮ ಡಿ-ನೋಟಿಫಿಕೇಷನ್ ಪ್ರಸ್ತಾವನೆಯು ಸುಮಾರು 2016 ರಿಂದ ಬಾಕಿ ಇದ್ದು, ಈಗ ಅಂತಿಮ ಘಟ್ಟಕ್ಕೆ ಬಂದಿದೆ. ಹಿಂದೆ 1,974 ರಲ್ಲಿ ನೋಟಿಫಿಕೇಷನ್ ಮಾಡಿದ ಸಂದರ್ಭದಲ್ಲಿ 395 ಚ.ಕೀ ಪ್ರದೇಶ ಸೇರ್ಪಡೆ ಮಾಡಿದ್ದರು. ಆದರೆ ಅದರಲ್ಲಿ ಬಸ್ ಸ್ಟ್ಯಾಂಡ್, ಎಫ್‌ಸಿಐ ಗೋಡಾನ್, ಎಪಿಎಂಸಿ, ಸರ್ಕಾರಿ ಕಚೇರಿಗಳು, ಜನವಸತಿ ಪ್ರದೇಶ ಸೇರ್ಪಡೆಗೊಂಡಿದ್ದು, ಇದೆಲ್ಲವನ್ನೂ ಪರಿಶೀಲನೆ ಮಾಡಿ, ಅಧಿಕಾರಿಗಳು ಸಮೀಕ್ಷೆಗಳನ್ನು ಮಾಡಿದ್ದಾರೆ ಎಂದರು.

ಈ ಕುರಿತ ಹಲವಾರು ಸಭೆಗಳನ್ನು ಮಾಡಲಾಗಿದೆ. ಅರಣ್ಯ ಸಂಪತ್ತು ಸಂರಕ್ಷಣೆ ಮಾಡಬೇಕು. ಜೀವನ ಮತ್ತು ಜೀವನೋಪಾಯ ಎರಡೂ ಬೇಕಾಗಿದ್ದು, ಆಡಳಿತಾತ್ಮಕವಾಗಿ, ಭಾವನಾತ್ಮಕವಾಗಿ ತೀರ್ಮಾನ ತೆಗೆದುಕೊಳ್ಳಲು ಖುದ್ದಾಗಿ ಪರಿಶೀಲಿಸಲು ಬಂದಿದ್ದೇನೆ. ನಂತರ ಸಭೆ ಮಾಡಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದರು.

ವನ್ಯಜೀವಿ ಸಂರಕ್ಷಣೆ ಆಗಬೇಕು, ಅರಣ್ಯ ಸಂಪತ್ತು ಉಳಿಯಬೇಕು ಹಾಗೂ ಅಭಿವೃದ್ದಿಯೂ ಆಗಬೇಕು. ಈ ನಿಟ್ಟಿನಲ್ಲಿ ಸರ್ಕಾರ ತೀರ್ಮಾನ ತೆಗೆದುಕೊಳ್ಳತ್ತಿದೆ. ಮಾನವ-ವನ್ಯಜೀವಿ ಸಂಘರ್ಷವನ್ನು ತಡೆಯಲು ಸರ್ಕಾರ ಹಲವಾರು ಕ್ರಮ ಕೈಗೊಂಡಿದೆ. ಆನೆ ಕಾರ್ಯಪೆಡೆ, ಚಿರತೆ ಕಾರ್ಯಪಡೆ, ಹೆಚ್ಚುವರಿ ಸಿಬ್ಬಂದಿ ನೇಮಕ, ಸಲಕರಣೆಗಳು, ಕ್ಯಾಂಪ್‌ಗಳು, ರೈಲ್ವೇ ಬ್ಯಾರಿಕೇಡ್, ಸೋಲಾರ್ ಫೆನ್ಸಿಂಗ್ ರಚನೆ, ಕಮಾಂಡ್ ಸೆಂಟರ್ ಗಳು, ಇಂಟಿಗ್ರೇಟೆಡ್ ಕಮಾಂಡ್ ಸೆಂಟರ್‌ಗಳು ಜೊತೆಗೆ ಜಾಗೃತಿಯನ್ನು ಮೂಡಿಸಲಾಗುತ್ತಿದೆ. ಈ ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗುತ್ತಿದ್ದು, ಒಂದೇ ಒಂದು ಜೀವ ಕಳೆದುಕೊಳ್ಳದ ರೀತಿ ಮಾನವ ಪ್ರಾಣ ಮತ್ತು ವನ್ಯಜೀವಿಗಳು ಉಳಿಯಬೇಕೆಂಬ ದೃಷ್ಟಿಯಲ್ಲಿ ಕ್ರಮ ವಹಿಸಲಾಗುತ್ತಿದೆ ಎಂದು ತಿಳಿಸಿದರು.

ಗ್ರಾಮಾಂತರ ಶಾಸಕಿ ಶಾರದಾ ಪೂರ್ಯಾನಾಯ್ಕ ಇದ್ದರು.

ಶರಾವತಿ ಸಂತ್ರಸ್ತರ ಸಮಸ್ಯೆ:ಅಂತಿಮ ಪಟ್ಟಿ ಬಳಿಕ ಕ್ರಮ

ಶರಾವತಿ ಸಂತ್ರಸ್ತರ ಸಮಸ್ಯೆಗಳಿಗೆ ಪರಿಹಾರೋಪಾಯ ಅಂತಿಮ ಘಟ್ಟ ತಲುಪಿದೆ. ಸರ್ವೋಚ್ಚ ನ್ಯಾಯಾಲಯಕ್ಕೆ ಅಪೀಲು ಸಲ್ಲಿಸಲಾಗಿದ್ದು, ನ್ಯಾಯಾಲಯವು, ಕೇಂದ್ರ ಸರ್ಕಾರ ಮತ್ತು ಅರಣ್ಯ ಇಲಾಖೆ ಸೇರಿ ತೀರ್ಮಾನ ಮಾಡಲು ಸೂಚಿಸಿದೆ. ಹಾಗೂ ಕಂದಾಯ ಇಲಾಖೆಯು ಅರ್ಹ ಫಲಾನುಭವಿಗಳನ್ನು ಗುರುತಿಸುತ್ತಿದ್ದು, ಅರಣ್ಯ ಇಲಾಖೆ ನಿರಂತರವಾಗಿ ಕಂದಾಯ ಇಲಾಖೆಯ ಸಂಪರ್ಕದಲ್ಲಿದೆ. ಕಂದಾಯ ಇಲಾಖೆ ಅಂತಿಮಗೊಳಿಸಿದ ಪಟ್ಟಿ ಬಂದ ತಕ್ಷಣ ಸುಮಾರು 60 ವರ್ಷಗಳ ನಂತರ ಸಂತ್ರಸ್ತರಿಗೆ ರಾಜ್ಯ ಸರ್ಕಾರ ಶಾಶ್ವತವಾಗಿ ಪರಿಹಾರ ನೀಡುತ್ತಿದೆ ಎಂದು ಅರಣ್ಯ ಸಚಿವ ಈಶ್ವರ್.ಬಿ ಖಂಡ್ರೆ ತಿಳಿಸಿದರು.

📢 ನಿಮ್ಮೂರ ಸುದ್ದಿಗಳನ್ನು ಇಮೇಲ್ ಮಾಡಿ

shivamoggaherald@gmail.com ಅಥವಾ ವಾಟ್ಸಾಪ್ ಸಂಖ್ಯೆಗೆ ಕಳುಹಿಸಿ ಕೊಡಿ.

📞 9113834502

ನೀವು ಇನ್ನೂ 'ಶಿವಮೊಗ್ಗ ಹೆರಾಲ್ಡ್' ವಾಟ್ಸಾಪ್ ಗುಂಪು ಸೇರಿಲ್ವ?

✅ ಈಗಲೇ ವಾಟ್ಸಾಪ್ ಗುಂಪು ಸೇರಿ

'Facebook' ನಲ್ಲಿ ಸುದ್ದಿ ಓದಲು ಈ ಲಿಂಕ್ ಕ್ಲಿಕ್ ಮಾಡಿ

👍 Facebook ನಲ್ಲಿ ಫಾಲೋ ಮಾಡಿ
Share
Written by
Shivamogga herald

'ಮಾಧ್ಯಮಗಳು ಸುಳ್ಳು ಸುದ್ದಿ ನಿಪುಣತೆಯಲ್ಲಿ ಮುಂಚೂಣಿಯಲ್ಲಿವೆ.' ಪತ್ರಕರ್ತರು ಪೂರಕ ಮಾಹಿತಿಯನ್ನು ಸಂಪಾದಿಸದೆ, ಅರೆಬರೆ ಬೆಂದ ಸುದ್ದಿಯ ಮಾಹಿತಿಯನ್ನು ಸಮಾಜಕ್ಕೆ ಹಂಚುವ ಮೂಲಕ ತಪ್ಪು ಸಂದೇಶ ನೀಡುತ್ತಿದ್ದಾರೆ. ಇದು ಸರಿಯಾದ ನಿಲುವಲ್ಲ'- ಹೀಗೊಂದು ಅಪವಾದ ಪತ್ರಕರ್ತರು ಹಾಗೂ ಪತ್ರಿಕೋದ್ಯಮದ ಮೇಲಿದೆ. ಆದ್ದರಿಂದ, ಇಲ್ಲಿ ನಮ್ಮ ಸ್ವಂತ ಅಭಿಪ್ರಾಯಗಳಿಗೆ ಸ್ಥಾನ ನೀಡಲು ಇಚ್ಛಿಸುವುದಿಲ್ಲ. ಓದುಗರಿಗೆ ಸತ್ಯ ಹಾಗೂ ನಿಖರತೆಯ ಸುದ್ದಿಯೊಂದಿಗೆ ಸುದ್ದಿಯಾಗಿ ಮಾತ್ರ ಕೊಡಲು ಬಯಸುತ್ತೇವೆ. ಇದೊಂದು ಮೈಲಿ ಗಲ್ಲು ಸಮಾಜವನ್ನು ಎಚ್ಚರಿಸುವ ಹಾಗೂ ಸಮ ಸಮಾಜ ಕಟ್ಟುವ ಕಾರ್ಯಕ್ಕೆ ಅಡಿಪಾಯ ಆಗಲಿದೆ ಎನ್ನುವ ವಿಶ್ವಾಸದೊಂದಿಗೆ 'ಶಿವಮೊಗ್ಗ ಹೆರಾಲ್ಡ್' ಡಿಜಿಟಲ್ ಮಾಧ್ಯಮ ಕಟ್ಟಿದ್ದೇವೆ. ಸ್ಥಳೀಯ ಸುದ್ದಿಗಳಿಗೆ ನಮ್ಮ ಮೊದಲ ಆದ್ಯತೆ. ಮಾಹಿತಿ ಹಾಗೂ ಸಲಹೆಗೆ ದೂರವಾಣಿ/ ವಾಟ್ಸಾಪ್ ಸಂಖ್ಯೆ: 9113834502, 8197788460 ಸಂಪರ್ಕಿಸಬಹುದು.

Leave a comment

Leave a Reply

Your email address will not be published. Required fields are marked *