Home Shivamogga News ಶಿವಮೊಗ್ಗ:ಸಿಎಂ ಸ್ಥಾನ ಪ್ರಶ್ನೆಗೆ ʼಡಿಕೆಶಿʼ ಮೌನದ ಸಂದೇಶ; ಕಾಲವೇ ತೀರ್ಮಾನ!
Shivamogga News

ಶಿವಮೊಗ್ಗ:ಸಿಎಂ ಸ್ಥಾನ ಪ್ರಶ್ನೆಗೆ ʼಡಿಕೆಶಿʼ ಮೌನದ ಸಂದೇಶ; ಕಾಲವೇ ತೀರ್ಮಾನ!

Share
Share

ಶಿವಮೊಗ್ಗ:ʼರಾಜ್ಯದಲ್ಲಿ ನಮ್ಮ ಪ್ರಯತ್ನದಿಂದಲೇ ಕಾಂಗ್ರೆಸ್‌ ಸರ್ಕಾರ ಆಡಳಿತಕ್ಕೆ ಬಂದಿರುವುದು. ನನ್ನನ್ನೂ ಒಳಗೊಂಡು ʼನನ್ನʼ ಪ್ರತಿಯೊಬ್ಬ ಕಾರ್ಯಕರ್ತರು ಪಕ್ಷಕ್ಕೆ ದುಡಿದಿದ್ದಾರೆ. ಸಿಎಂ ಆಗುವ ವಿಚಾರಕ್ಕೆ ಕಾಲವೇ ಉತ್ತರ ಕೊಡುತ್ತದೆ. ಸಧ್ಯಕ್ಕೆ ಏನು ಬೇಡʼ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದರು.

ಮುಖ್ಯಮಂತ್ರಿ ಸ್ಥಾನದ ವಿಚಾರವಾಗಿ ನಿಮ್ಮ ಅಭಿಮಾನಿಗಳ ಒತ್ತಡವೂ ಹೆಚ್ಚಿದೆ. ಸಿಎಂ ಆಗಲು ನಿಮ್ಮ ಪ್ರಯತ್ನ ಏನು ಎಂದು ನಗರದಲ್ಲಿ ಗುರುವಾರ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಈ ಬಗ್ಗೆ ಚರ್ಚೆ ಬೇಡ. ನನಗೆ ನೀಡಿರುವ ಜವಾಬ್ದಾರಿ ನಿಭಾಯಿಸಿಕೊಂಡು ಹೋಗುತ್ತೇನೆ ಎಂದು ಹೇಳಿದರು.

ಕನಕಪುರದ ಕನಕೋತ್ಸವ ರಾಜ್ಯಕ್ಕೆ ಮಾದರಿಯಾಗುವಂತೆ ನಡೆಯುತ್ತಿದೆ. ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಿಗೆ ವ್ಯಾಪಕವಾಗಿ ಪ್ರಚಾರ ನೀಡುವ ಉದ್ದೇಶದಿಂದ ‘ಪ್ರತಿ ಮನೆಗೆ ಐದು ಗ್ಯಾರಂಟಿಗಳು. ಮನೆ ಮುಂದೆ ರಂಗೋಲಿ’ ಎಂಬ ಶೀರ್ಷಿಕೆಯಡಿ ರಂಗೋಲಿ ಹಾಕುವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಇಲ್ಲಿ 73 ಸಾವಿರ ಜನ ಸ್ಪರ್ಧೆಯಲ್ಲಿ ಭಾಗವಹಿಸಿದ್ದಾರೆ. 10-11 ಸಾವಿರ ಮುಸ್ಲಿಮರು ಮೆಹೆಂದಿ ಸ್ಪರ್ಧೆಯಲ್ಲಿ ಭಾಗವಹಿಸಿದ್ದಾರೆ ಎಂದರು.

ಸ್ಥಳೀಯ ಸಂಸ್ಥೆ ಚುನಾವಣೆಯನ್ನು ನಡೆಸಲಾಗುವುದು. ಎರಡು ದಿನದೊಳಗೆ ಚುನಾವಣೆಗಳ ಮೀಸಲಾತಿ ವಿಚಾರವಾಗಿ ನ್ಯಾಯಾಲಯದಲ್ಲಿ ವಿಚಾರಣೆ ಇದೆ. ನಮ್ಮ ನಾಯಕರುಗಳಿಗೆ ಸಿದ್ದವಾಗಲು ಸೂಚಿಸಿದ್ದೆವೆ. ಬ್ಯಾಲೆಟ್ ನಲ್ಲಿ ಚುನಾವಣೆ ನಡೆಸಲಾಗುವುದು. ಹೆಚ್ಚಿನ ಮಾಹಿತಿ ಒದಗಿಸಲಾಗುವುದು ಎಂದರು.

ʼಕೇಂದ್ರದಿಂದ ನರೇಗಾ ಯೋಜನೆಗೆ ಸಮಾಧಿʼ: ಡಿಕೆಶಿ

ಬಿಜೆಪಿ ಕೇಂದ್ರ ಸರ್ಕಾರದಿಂದ ನರೇಗಾ ಯೋಜನೆಗೆ ಸಮಾಧಿ ಕಟ್ಟಲಾಗಿದೆ. ಈ ಬಗ್ಗೆ ಪತ್ರಿಕೆಗಳಿಗೆ ಜಾಹೀರಾತು ಕೊಡುವುದರಲ್ಲಿ ತಪ್ಪೇನಿದೆ. ನರೇಗಾ ಬಗ್ಗೆ ಮಾಹಿತಿಯನ್ನು ನಮ್ಮದೇ ಶೈಲಿಯಲ್ಲಿ ಕೊಡುತ್ತಿದ್ದೆವೆ. ನರೇಗಾ ಮೊದಲು ಹೇಗೆ ಇತ್ತು? ಏನು ಬದಲಾಗಿದೆ ತಿಳಿಸುತ್ತಿದ್ದೇವೆ. ನರೇಗಾ ವಿಚಾರದಲ್ಲಿ ಹೋರಾಟ ಮುಂದುವರಿಯುತ್ತದೆ. ಈ ಹಿಂದೆ 7 ಸಾವಿರ ಕೋಟಿ ನರೇಗಾ ಹಣ ಕೇಂದ್ರದಿಂದ ಬರುತ್ತಿತ್ತು. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಉದ್ಯೋಗ ಕೊಡುವ ಬಗ್ಗೆ ತೀರ್ಮಾನ ಆಗುತ್ತಿತ್ತು. ಈಗ ಪಂಚಾಯಿತಿಯ ಅಧಿಕಾರ ಕಿತ್ತುಕೊಳ್ಳಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಆರೋಪಿಸಿದರು.

ದೆಹಲಿಯಲ್ಲಿ ಕುಳಿತು, ಸ್ಯಾಟಲೈಟ್ ಮೂಲಕ ತೀರ್ಮಾನ ಮಾಡ್ತಾರಂತೆ. ಪಂಚಾಯಿತಿಗಳು ಉತ್ತಮ ಕೆಲಸ ಮಾಡುವುದನ್ನು ಹತ್ತಿಕ್ಕಲು ಹೊರಟಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮ ಗಾಂಧಿ ಹೆಸರನ್ನು ತೆಗೆದುಹಾಕಿದ್ದಾರೆ. ಬಿಜೆಪಿಯವರಿಗೆ ಯಾವ ನೈತಿಕತೆ ಇದೆ. ವಿಶೇಷ ಅಧಿವೇಶನದಲ್ಲಿ ಈ ಬಗ್ಗೆಯೇ ಚರ್ಚೆ ಆಗಿದೆ. ಈ ಬಗ್ಗೆ ನಿರ್ಣಯ ಕೈಗೊಳ್ಳಲಾಗುವುದು ಎಂದರು.

 

 

 

📢 ನಿಮ್ಮೂರ ಸುದ್ದಿಗಳನ್ನು ಇಮೇಲ್ ಮಾಡಿ

shivamoggaherald@gmail.com ಅಥವಾ ವಾಟ್ಸಾಪ್ ಸಂಖ್ಯೆಗೆ ಕಳುಹಿಸಿ ಕೊಡಿ.

📞 9113834502

ನೀವು ಇನ್ನೂ 'ಶಿವಮೊಗ್ಗ ಹೆರಾಲ್ಡ್' ವಾಟ್ಸಾಪ್ ಗುಂಪು ಸೇರಿಲ್ವ?

✅ ಈಗಲೇ ವಾಟ್ಸಾಪ್ ಗುಂಪು ಸೇರಿ

'Facebook' ನಲ್ಲಿ ಸುದ್ದಿ ಓದಲು ಈ ಲಿಂಕ್ ಕ್ಲಿಕ್ ಮಾಡಿ

👍 Facebook ನಲ್ಲಿ ಫಾಲೋ ಮಾಡಿ
Share
Written by
Shivamogga herald

'ಮಾಧ್ಯಮಗಳು ಸುಳ್ಳು ಸುದ್ದಿ ನಿಪುಣತೆಯಲ್ಲಿ ಮುಂಚೂಣಿಯಲ್ಲಿವೆ.' ಪತ್ರಕರ್ತರು ಪೂರಕ ಮಾಹಿತಿಯನ್ನು ಸಂಪಾದಿಸದೆ, ಅರೆಬರೆ ಬೆಂದ ಸುದ್ದಿಯ ಮಾಹಿತಿಯನ್ನು ಸಮಾಜಕ್ಕೆ ಹಂಚುವ ಮೂಲಕ ತಪ್ಪು ಸಂದೇಶ ನೀಡುತ್ತಿದ್ದಾರೆ. ಇದು ಸರಿಯಾದ ನಿಲುವಲ್ಲ'- ಹೀಗೊಂದು ಅಪವಾದ ಪತ್ರಕರ್ತರು ಹಾಗೂ ಪತ್ರಿಕೋದ್ಯಮದ ಮೇಲಿದೆ. ಆದ್ದರಿಂದ, ಇಲ್ಲಿ ನಮ್ಮ ಸ್ವಂತ ಅಭಿಪ್ರಾಯಗಳಿಗೆ ಸ್ಥಾನ ನೀಡಲು ಇಚ್ಛಿಸುವುದಿಲ್ಲ. ಓದುಗರಿಗೆ ಸತ್ಯ ಹಾಗೂ ನಿಖರತೆಯ ಸುದ್ದಿಯೊಂದಿಗೆ ಸುದ್ದಿಯಾಗಿ ಮಾತ್ರ ಕೊಡಲು ಬಯಸುತ್ತೇವೆ. ಇದೊಂದು ಮೈಲಿ ಗಲ್ಲು ಸಮಾಜವನ್ನು ಎಚ್ಚರಿಸುವ ಹಾಗೂ ಸಮ ಸಮಾಜ ಕಟ್ಟುವ ಕಾರ್ಯಕ್ಕೆ ಅಡಿಪಾಯ ಆಗಲಿದೆ ಎನ್ನುವ ವಿಶ್ವಾಸದೊಂದಿಗೆ 'ಶಿವಮೊಗ್ಗ ಹೆರಾಲ್ಡ್' ಡಿಜಿಟಲ್ ಮಾಧ್ಯಮ ಕಟ್ಟಿದ್ದೇವೆ. ಸ್ಥಳೀಯ ಸುದ್ದಿಗಳಿಗೆ ನಮ್ಮ ಮೊದಲ ಆದ್ಯತೆ. ಮಾಹಿತಿ ಹಾಗೂ ಸಲಹೆಗೆ ದೂರವಾಣಿ/ ವಾಟ್ಸಾಪ್ ಸಂಖ್ಯೆ: 9113834502, 8197788460 ಸಂಪರ್ಕಿಸಬಹುದು.

Leave a comment

Leave a Reply

Your email address will not be published. Required fields are marked *