ಶಿಕಾರಿಪುರ:’ಜಮೀನಿನ ಖಾತೆ ಬದಲಾವಣೆ ಮಾಡಿಕೊಡುವುದಾಗಿ ಹೇಳಿ ₹1 ಲಕ್ಷ ಲಂಚ ಸ್ವೀಕರಿಸುತ್ತಿದ್ದ ಚಿಕ್ಕಜಂಬೂರು ಗ್ರಾಮ ಲೆಕ್ಕಾಧಿಕಾರಿ (ವಿಎ) ವಿಠ್ಠಲ ಕೋಲಾರ ಅವರನ್ನು ಲೋಕಾಯುಕ್ತ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.’
‘ಪಟ್ಟಣದ ಸರ್ಕಾರಿ ನೌಕರರ ಕ್ಯಾಂಟೀನ್ನಲ್ಲಿ ಲಂಚದ ಹಣ ಪಡೆಯುವ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದುಕೊಂಡರು. ವಿಚಾರಣೆ ಬಳಿಕ ಅವರನ್ನು ಬಂಧಿಸಲಾಗಿದೆ.’
‘ಚಿಕ್ಕಜಂಬೂರು ಗ್ರಾಮದ ಜಿಕ್ರಿಯಾ ಬೇಗ್ ಅವರು ತಮ್ಮ ತಂದೆಯ ವಿಲ್ಪತ್ರ (ಉಯಿಲು) ಆಧಾರದಲ್ಲಿ ಜಮೀನಿನ ಖಾತೆ ಬದಲಾವಣೆಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸಿದ್ದರು. ಈ ಪ್ರಕ್ರಿಯೆ ಪೂರ್ಣಗೊಳಿಸಲು ವಿಠ್ಠಲ ಕೋಲಾರ ಅವರು ₹4 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂಬ ಆರೋಪ ಕೇಳಿಬಂದಿದೆ.’
‘ಬಳಿಕ ಮೊದಲ ಕಂತಾಗಿ ₹1 ಲಕ್ಷವನ್ನು ಸರ್ಕಾರಿ ನೌಕರರ ಕ್ಯಾಂಟೀನ್ನಲ್ಲಿ ನೀಡುವಂತೆ ಸೂಚನೆ ನೀಡಿದ್ದರು ಎನ್ನಲಾಗಿದೆ. ಲಂಚ ಬೇಡಿಕೆ ಹಿನ್ನೆಲೆಯಲ್ಲಿ ಜಿಕ್ರಿಯಾ ಬೇಗ್ ಅವರು ಲೋಕಾಯುಕ್ತರಿಗೆ ದೂರು ಸಲ್ಲಿಸಿದ್ದರು.
ದೂರಿನ ಆಧಾರದ ಮೇಲೆ ಲೋಕಾಯುಕ್ತ ಡಿವೈಎಸ್ಪಿ ಚಂದ್ರಶೇಖರ್ ಅವರ ನೇತೃತ್ವದಲ್ಲಿ ಇನ್ಸ್ಪೆಕ್ಟರ್ ಮೈಲಾರ ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಲೆಗೆ ಬೀಳಿಸಿದ್ದಾರೆ. ಪ್ರಕರಣ ಸಂಬಂಧ ಮುಂದಿನ ತನಿಖೆ ನಡೆಯುತ್ತಿದೆ.’
📢 ನಿಮ್ಮೂರ ಸುದ್ದಿಗಳನ್ನು ಇಮೇಲ್ ಮಾಡಿ
shivamoggaherald@gmail.com ಅಥವಾ ವಾಟ್ಸಾಪ್ ಸಂಖ್ಯೆಗೆ ಕಳುಹಿಸಿ ಕೊಡಿ.
ನೀವು ಇನ್ನೂ 'ಶಿವಮೊಗ್ಗ ಹೆರಾಲ್ಡ್' ವಾಟ್ಸಾಪ್ ಗುಂಪು ಸೇರಿಲ್ವ?
✅ ಈಗಲೇ ವಾಟ್ಸಾಪ್ ಗುಂಪು ಸೇರಿ'Facebook' ನಲ್ಲಿ ಸುದ್ದಿ ಓದಲು ಈ ಲಿಂಕ್ ಕ್ಲಿಕ್ ಮಾಡಿ
👍 Facebook ನಲ್ಲಿ ಫಾಲೋ ಮಾಡಿ
Leave a comment