ಶಿವಮೊಗ್ಗ:’ಸಾಗರ ಮಾರಿಕಾಂಬ ದೇವಿ ಜಾತ್ರೆಯ ಹಿನ್ನೆಲೆಯಲ್ಲಿ ದೇವಿಯ ದರ್ಶನಕ್ಕೆ ತೆರಳಿದ್ದ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರು ಅಸ್ವಸ್ಥಗೊಂಡು ಕುಸಿದು ಬಿದ್ದ ಘಟನೆ ನಡೆದಿದೆ.
ತಕ್ಷಣವೇ ಅವರನ್ನು ಸಾಗರದ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಉಪ ವಿಭಾಗೀಯ ಆಸ್ಪತ್ರೆಯ ವೈದ್ಯರಾದ ವಿಕ್ರಂ ಅವರು ಪ್ರಾಥಮಿಕ ಚಿಕಿತ್ಸೆ ನೀಡಿದ್ದಾರೆ. ದೇವಸ್ಥಾನದಲ್ಲಿ ಉಂಟಾಗಿದ್ದ ಭಾರಿ ಜನಸಂದಣಿಯಿಂದ ಉಸಿರಾಟ ಸಮಸ್ಯೆ ಉಂಟಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಪ್ರಸ್ತುತ ಕಾಗೋಡು ತಿಮ್ಮಪ್ಪ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಆತಂಕಕ್ಕೆ ಕಾರಣವಿಲ್ಲ ಎಂದು ಆಸ್ಪತ್ರೆ ಮೂಲಗಳು ಮಾಹಿತಿ ನೀಡಿವೆ.
📢 ನಿಮ್ಮೂರ ಸುದ್ದಿಗಳನ್ನು ಇಮೇಲ್ ಮಾಡಿ
shivamoggaherald@gmail.com ಅಥವಾ ವಾಟ್ಸಾಪ್ ಸಂಖ್ಯೆಗೆ ಕಳುಹಿಸಿ ಕೊಡಿ.
ನೀವು ಇನ್ನೂ 'ಶಿವಮೊಗ್ಗ ಹೆರಾಲ್ಡ್' ವಾಟ್ಸಾಪ್ ಗುಂಪು ಸೇರಿಲ್ವ?
✅ ಈಗಲೇ ವಾಟ್ಸಾಪ್ ಗುಂಪು ಸೇರಿ'Facebook' ನಲ್ಲಿ ಸುದ್ದಿ ಓದಲು ಈ ಲಿಂಕ್ ಕ್ಲಿಕ್ ಮಾಡಿ
👍 Facebook ನಲ್ಲಿ ಫಾಲೋ ಮಾಡಿ
Leave a comment