Home Crime ಶಿಕಾರಿಪುರ:’ಮನೆಯಲ್ಲಿಯೇ ನಾಡ ಬಂದೂಕು ತಯಾರಿಕೆ ಕಾರ್ಖಾನೆ, ಏಳು ಬಂದೂಕು ಜೊತೆ ಆರೋಪಿ ಬಂಧನ’
CrimeHome

ಶಿಕಾರಿಪುರ:’ಮನೆಯಲ್ಲಿಯೇ ನಾಡ ಬಂದೂಕು ತಯಾರಿಕೆ ಕಾರ್ಖಾನೆ, ಏಳು ಬಂದೂಕು ಜೊತೆ ಆರೋಪಿ ಬಂಧನ’

Share
Share

ಶಿಕಾರಿಪುರ:’ನಾಡ ಬಂದೂಕು ತಯಾರಿಸಿ ಮಾರಾಟಕ್ಕಾಗಿ ಮನೆಯಲ್ಲಿ ಇಟ್ಟುಕೊಂಡಿದ್ದ ಸಮೀಪದ ಭದ್ರಾಪುರ ಗ್ರಾಮದ ವ್ಯಕ್ತಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ.’

ಲಕ್ಷ್ಮಣಪ್ಪ (67) ಬಂಧಿತ ಆರೋಪಿ. ಬಡಗಿ ವೃತ್ತಿ ಮಾಡುವ ಅವರು ಮನೆಯಲ್ಲಿ ನಾಡ ಬಂದೂಕು ತಯಾರಿಸುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ ಶೋಧ ನಡೆಸಿದಾಗ ಸಿದ್ಧವಾಗಿರುವ 7ಬಂದೂಕು, ಮರದಲ್ಲಿ ಸಿದ್ಧಪಡಿಸುತ್ತಿರುವ ಮೂರು ಆಕೃತಿ, ಕಬ್ಬಿಣದ ನಳಿಕೆ ಸೇರಿ ಹಲವು ಪರಿಕರ ವಶಕ್ಕೆ ಪಡೆದಿದ್ದಾರೆ.

ಶಸ್ತ್ರಾಸ್ತ್ರ ತಿದ್ದುಪಡಿ ಅಧಿನಿಯಮ 2019ರ ಅನ್ವಯ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಡಿವೈಎಸ್‌ಪಿ ಕೆ.ಇ. ಕೇಶವ ನೇತೃತ್ವದಲ್ಲಿ ನಡೆದ ದಾಳಿಯಲ್ಲಿ ಪಿಎಸ್‌ಐ ಎಚ್‌.ಶರತ್, ಸಿಬ್ಬಂದಿಯಾದ ಕೊಟ್ರೇಶಪ್ಪ, ಕೆ.ಪ್ರದೀಪ್‌, ನಾಗರಾಜ, ರವಿ ನಾಯ್ಕ, ರವಿಕುಮಾರ್ ಪಾಲ್ಗೊಂಡಿದ್ದರು.

📢 ನಿಮ್ಮೂರ ಸುದ್ದಿಗಳನ್ನು ಇಮೇಲ್ ಮಾಡಿ

shivamoggaherald@gmail.com ಅಥವಾ ವಾಟ್ಸಾಪ್ ಸಂಖ್ಯೆಗೆ ಕಳುಹಿಸಿ ಕೊಡಿ.

📞 9113834502

ನೀವು ಇನ್ನೂ 'ಶಿವಮೊಗ್ಗ ಹೆರಾಲ್ಡ್' ವಾಟ್ಸಾಪ್ ಗುಂಪು ಸೇರಿಲ್ವ?

✅ ಈಗಲೇ ವಾಟ್ಸಾಪ್ ಗುಂಪು ಸೇರಿ

'Facebook' ನಲ್ಲಿ ಸುದ್ದಿ ಓದಲು ಈ ಲಿಂಕ್ ಕ್ಲಿಕ್ ಮಾಡಿ

👍 Facebook ನಲ್ಲಿ ಫಾಲೋ ಮಾಡಿ
Share
Written by
Shivamogga herald

'ಮಾಧ್ಯಮಗಳು ಸುಳ್ಳು ಸುದ್ದಿ ನಿಪುಣತೆಯಲ್ಲಿ ಮುಂಚೂಣಿಯಲ್ಲಿವೆ.' ಪತ್ರಕರ್ತರು ಪೂರಕ ಮಾಹಿತಿಯನ್ನು ಸಂಪಾದಿಸದೆ, ಅರೆಬರೆ ಬೆಂದ ಸುದ್ದಿಯ ಮಾಹಿತಿಯನ್ನು ಸಮಾಜಕ್ಕೆ ಹಂಚುವ ಮೂಲಕ ತಪ್ಪು ಸಂದೇಶ ನೀಡುತ್ತಿದ್ದಾರೆ. ಇದು ಸರಿಯಾದ ನಿಲುವಲ್ಲ'- ಹೀಗೊಂದು ಅಪವಾದ ಪತ್ರಕರ್ತರು ಹಾಗೂ ಪತ್ರಿಕೋದ್ಯಮದ ಮೇಲಿದೆ. ಆದ್ದರಿಂದ, ಇಲ್ಲಿ ನಮ್ಮ ಸ್ವಂತ ಅಭಿಪ್ರಾಯಗಳಿಗೆ ಸ್ಥಾನ ನೀಡಲು ಇಚ್ಛಿಸುವುದಿಲ್ಲ. ಓದುಗರಿಗೆ ಸತ್ಯ ಹಾಗೂ ನಿಖರತೆಯ ಸುದ್ದಿಯೊಂದಿಗೆ ಸುದ್ದಿಯಾಗಿ ಮಾತ್ರ ಕೊಡಲು ಬಯಸುತ್ತೇವೆ. ಇದೊಂದು ಮೈಲಿ ಗಲ್ಲು ಸಮಾಜವನ್ನು ಎಚ್ಚರಿಸುವ ಹಾಗೂ ಸಮ ಸಮಾಜ ಕಟ್ಟುವ ಕಾರ್ಯಕ್ಕೆ ಅಡಿಪಾಯ ಆಗಲಿದೆ ಎನ್ನುವ ವಿಶ್ವಾಸದೊಂದಿಗೆ 'ಶಿವಮೊಗ್ಗ ಹೆರಾಲ್ಡ್' ಡಿಜಿಟಲ್ ಮಾಧ್ಯಮ ಕಟ್ಟಿದ್ದೇವೆ. ಸ್ಥಳೀಯ ಸುದ್ದಿಗಳಿಗೆ ನಮ್ಮ ಮೊದಲ ಆದ್ಯತೆ. ಮಾಹಿತಿ ಹಾಗೂ ಸಲಹೆಗೆ ದೂರವಾಣಿ/ ವಾಟ್ಸಾಪ್ ಸಂಖ್ಯೆ: 9113834502, 8197788460 ಸಂಪರ್ಕಿಸಬಹುದು.

Leave a comment

Leave a Reply

Your email address will not be published. Required fields are marked *