Home Shivamogga News ‘ರಾಜ್ಯದಲ್ಲಿ ಕಲೆಕ್ಷನ್, ಕಮಿಷನ್ ಮತ್ತು ಕರಪ್ಷನ್ ಸರ್ಕಾರದ ಆಡಳಿತ, ಸಚಿವ ಆರ್‌.ಬಿ.ತಿಮ್ಮಾಪುರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ನಗರ ಘಟಕ ಪ್ರತಿಭಟನೆ’
Shivamogga News

‘ರಾಜ್ಯದಲ್ಲಿ ಕಲೆಕ್ಷನ್, ಕಮಿಷನ್ ಮತ್ತು ಕರಪ್ಷನ್ ಸರ್ಕಾರದ ಆಡಳಿತ, ಸಚಿವ ಆರ್‌.ಬಿ.ತಿಮ್ಮಾಪುರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ನಗರ ಘಟಕ ಪ್ರತಿಭಟನೆ’

Share
Share

ಶಿವಮೊಗ್ಗ:’ಅಬಕಾರಿ ಸಚಿವರ ಮೂಗಿನ ಕೆಳಗೇ ಭ್ರಷ್ಟಾಚಾರ ನಡೆಯುತ್ತಿದ್ದರೂ ಕ್ರಮ ಕೈಗೊಂಡಿಲ್ಲ. ಇದಕ್ಕೆ ಸಚಿವರ ಪ್ರೇರಣೆ ಇದೆ ಅಂತಲೇ ಅರ್ಥ’ ಎಂದು ಶಾಸಕ ಎಸ್‌.ಎನ್‌.ಚನ್ನಬಸಪ್ಪ ದೂರಿದರು.

ಅಬಕಾರಿ ಇಲಾಖೆಯಲ್ಲಿನ ಭ್ರಷ್ಟಾಚಾರ ಖಂಡಿಸಿ, ಸಚಿವ ಆರ್‌.ಬಿ.ತಿಮ್ಮಾಪುರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ನಗರ ಘಟಕ ಕಾರ್ಯಕರ್ತರು ಗುರುವಾರ ಇಲ್ಲಿನ ಶಿವಪ್ಪನಾಯಕ ಪ್ರತಿಮೆ ಎದುರು ಪ್ರತಿಭಟನೆ ನಡೆಸಿದರು.

ಸಚಿವ ತಿಮ್ಮಾಪುರ ಭ್ರಷ್ಟಚಾರಕ್ಕೆ ಅವಕಾಶ ಕೊಡದಿದ್ದರೆ ಹಗರಣಗಳು ನಡೆಯಲು ಸಾಧ್ಯವಿಲ್ಲ. ಸಚಿವರ ವರ್ತನೆ ಮತ್ತು ಅಕ್ರಮಗಳಲ್ಲಿನ ಭಾಗೀದಾರಿಕೆಯಿಂದಲೇ ಇಂದು ಅಬಕಾರಿ ಇಲಾಖೆಯು ಸಂಪೂರ್ಣ ಭ್ರಷ್ಟ ಇಲಾಖೆಯಾಗಿದೆ ಎಂದು ಆರೋಪಿಸಿದರು.

‘ಆಡು ಮುಟ್ಟದ ಸೊಪ್ಪಿಲ್ಲ, ಕಾಂಗ್ರೆಸ್ ಬೆಲೆ ಏರಿಸದ ವಸ್ತುವಿಲ್ಲ ಎನ್ನುತ್ತಾ ಹಾಲು, ಮದ್ಯ, ದಿನಸಿ ಮತ್ತು ಪೆಟ್ರೋಲ್ ಬೆಲೆ ಏರಿಕೆಯ ಮೂಲಕ ಜನಸಾಮಾನ್ಯರ ಮೇಲೆ ಹೊರೆ ಹಾಕಲಾಗಿದೆ. ರಾಜ್ಯದಲ್ಲಿ ಕಲೆಕ್ಷನ್, ಕಮಿಷನ್ ಮತ್ತು ಕರಪ್ಷನ್ ಎಂಬ ಮೂರು ‘ಸಿ’ ಗಳ ಸರ್ಕಾರ ಆಡಳಿತ ನಡೆಸುತ್ತಿದೆ. ಸರ್ಕಾರಿ ಅಧಿಕಾರಿಗಳ ವರ್ಗಾವಣೆ, ಬಿಲ್ಡಿಂಗ್ ಲೈಸೆನ್ಸ್ ಮತ್ತು ಮಂಜೂರಾತಿ ಪ್ರಕ್ರಿಯೆಗಳಲ್ಲಿ ಮಂತ್ರಿಗಳ ಮಟ್ಟದವರೆಗೆ ಕಮಿಷನ್ ತಲುಪುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಡಾ.ಧನಂಜಯ ಸರ್ಜಿ ಆರೋಪ ಮಾಡಿದರು.

ಅಧಿಕಾರಿಗಳ ಮೇಲೆ 1.8 ಲಕ್ಷದಿಂದ 3.6 ಲಕ್ಷದವರೆಗೆ ವಸೂಲಿ ಮಾಡುವಂತೆ ಒತ್ತಡ ಹೇರಲಾಗುತ್ತಿದೆ ಮತ್ತು ಲೈಸೆನ್ಸ್ ರದ್ದು ಮಾಡುವ ಬೆದರಿಕೆ ಹಾಕಲಾಗುತ್ತಿದೆ. <span;>ಬಿಜೆಪಿ ಕಾಲದಲ್ಲಿ ₹32 ಸಾವಿರ ಕೋಟಿ ಇದ್ದ ಅಬಕಾರಿ ಆದಾಯದ ಗುರಿಯನ್ನು ಈಗ ₹40 ಸಾವಿರ ಕೋಟಿಗೆ ಏರಿಸಲಾಗಿದೆ. ಈ ₹8 ಸಾವಿರ ಕೋಟಿ ವ್ಯತ್ಯಾಸವು ಕಲೆಕ್ಷನ್ ಮತ್ತು ಭ್ರಷ್ಟಾಚಾರಕ್ಕೆ ದಾರಿಯಾಗಿದೆ ಎಂದು ಆರೋಪಿಸಿದರು.

📢 ನಿಮ್ಮೂರ ಸುದ್ದಿಗಳನ್ನು ಇಮೇಲ್ ಮಾಡಿ

shivamoggaherald@gmail.com ಅಥವಾ ವಾಟ್ಸಾಪ್ ಸಂಖ್ಯೆಗೆ ಕಳುಹಿಸಿ ಕೊಡಿ.

📞 9113834502

ನೀವು ಇನ್ನೂ 'ಶಿವಮೊಗ್ಗ ಹೆರಾಲ್ಡ್' ವಾಟ್ಸಾಪ್ ಗುಂಪು ಸೇರಿಲ್ವ?

✅ ಈಗಲೇ ವಾಟ್ಸಾಪ್ ಗುಂಪು ಸೇರಿ

'Facebook' ನಲ್ಲಿ ಸುದ್ದಿ ಓದಲು ಈ ಲಿಂಕ್ ಕ್ಲಿಕ್ ಮಾಡಿ

👍 Facebook ನಲ್ಲಿ ಫಾಲೋ ಮಾಡಿ
Share
Written by
Shivamogga herald

'ಮಾಧ್ಯಮಗಳು ಸುಳ್ಳು ಸುದ್ದಿ ನಿಪುಣತೆಯಲ್ಲಿ ಮುಂಚೂಣಿಯಲ್ಲಿವೆ.' ಪತ್ರಕರ್ತರು ಪೂರಕ ಮಾಹಿತಿಯನ್ನು ಸಂಪಾದಿಸದೆ, ಅರೆಬರೆ ಬೆಂದ ಸುದ್ದಿಯ ಮಾಹಿತಿಯನ್ನು ಸಮಾಜಕ್ಕೆ ಹಂಚುವ ಮೂಲಕ ತಪ್ಪು ಸಂದೇಶ ನೀಡುತ್ತಿದ್ದಾರೆ. ಇದು ಸರಿಯಾದ ನಿಲುವಲ್ಲ'- ಹೀಗೊಂದು ಅಪವಾದ ಪತ್ರಕರ್ತರು ಹಾಗೂ ಪತ್ರಿಕೋದ್ಯಮದ ಮೇಲಿದೆ. ಆದ್ದರಿಂದ, ಇಲ್ಲಿ ನಮ್ಮ ಸ್ವಂತ ಅಭಿಪ್ರಾಯಗಳಿಗೆ ಸ್ಥಾನ ನೀಡಲು ಇಚ್ಛಿಸುವುದಿಲ್ಲ. ಓದುಗರಿಗೆ ಸತ್ಯ ಹಾಗೂ ನಿಖರತೆಯ ಸುದ್ದಿಯೊಂದಿಗೆ ಸುದ್ದಿಯಾಗಿ ಮಾತ್ರ ಕೊಡಲು ಬಯಸುತ್ತೇವೆ. ಇದೊಂದು ಮೈಲಿ ಗಲ್ಲು ಸಮಾಜವನ್ನು ಎಚ್ಚರಿಸುವ ಹಾಗೂ ಸಮ ಸಮಾಜ ಕಟ್ಟುವ ಕಾರ್ಯಕ್ಕೆ ಅಡಿಪಾಯ ಆಗಲಿದೆ ಎನ್ನುವ ವಿಶ್ವಾಸದೊಂದಿಗೆ 'ಶಿವಮೊಗ್ಗ ಹೆರಾಲ್ಡ್' ಡಿಜಿಟಲ್ ಮಾಧ್ಯಮ ಕಟ್ಟಿದ್ದೇವೆ. ಸ್ಥಳೀಯ ಸುದ್ದಿಗಳಿಗೆ ನಮ್ಮ ಮೊದಲ ಆದ್ಯತೆ. ಮಾಹಿತಿ ಹಾಗೂ ಸಲಹೆಗೆ ದೂರವಾಣಿ/ ವಾಟ್ಸಾಪ್ ಸಂಖ್ಯೆ: 9113834502, 8197788460 ಸಂಪರ್ಕಿಸಬಹುದು.

Leave a comment

Leave a Reply

Your email address will not be published. Required fields are marked *