Home Cultural Events ಪಠ್ಯದಲ್ಲಿ ‘ಹಸೆಚಿತ್ತಾರ’ ಸೇರ್ಪಡೆಗೆ ಕ್ರಮ: ಸಚಿವ ಮಧು ಬಂಗಾರಪ್ಪ
Cultural EventsHomeShivamogga NewsTaluk News

ಪಠ್ಯದಲ್ಲಿ ‘ಹಸೆಚಿತ್ತಾರ’ ಸೇರ್ಪಡೆಗೆ ಕ್ರಮ: ಸಚಿವ ಮಧು ಬಂಗಾರಪ್ಪ

Share
Share

ಬಲೆಗಾರು/ಸಾಗರ:’ಮಲೆನಾಡಿನ ದೀವರು ಸಮುದಾಯ ಪೋಷಿಸಿಕೊಂಡು ಬಂದಿರುವ ಹಸೆ ಚಿತ್ತಾರ ಕಲೆಯನ್ನು ಶಾಲೆಗಳ ಪಠ್ಯಕ್ರಮದಲ್ಲಿ ಸೇರಿಸಲಾಗುವುದು’ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದರು.

ಸಾಗರದ ಬಲೆಗಾರು ಗ್ರಾಮದಲ್ಲಿ ಭಾನುವಾರ ಕರ್ನಾಟಕ ದೀವರು ಸಾಂಸ್ಕೃತಿಕ ಅಧ್ಯಯನ ಸಂಸ್ಥೆ ಹಮ್ಮಿಕೊಂಡಿದ್ದ ಸದಸ್ಯತ್ವ ಅಭಿಯಾನ ಚಾಲನೆ‌ ಹಾಗೂ ದೀವರು ಹಸೆ ಚಿತ್ತಾರ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಹಸೆ ಚಿತ್ತಾರದಂತ ಕಲೆಯು ಸಾವಿರಾರು ವರ್ಷಗಳಿಂದ ಮಹಿಳೆಯರು ಕಾಪಿಟ್ಟುಕೊಂಡು ಬಂದಿದ್ದು, ಕರ್ನಾಟಕದ ನೆಲಮೂಲದ ಕಲೆಯಾಗಿದೆ. ಇದರ ಪ್ರೋತ್ಸಾಹಕ್ಕೆ ಹಾಗೂ ನಮ್ಮ ಸಂಸ್ಕೃತಿ ಕಲೆಗಳ ಉಳಿವಿಗೆ ನಾನು ನಿಮ್ಮ ಸಂಸ್ಥೆಯ ಪ್ರಯತ್ನಕ್ಕೆ  ಕೈಜೋಡಿಸುತ್ತೇನೆ ಎಂದವರು ಹೇಳಿ ಸಂಸ್ಥೆಗೆ ಶುಭಹಾರೈಸಿದರು.‌

ಇದಕ್ಕೂ ಮೊದಲು ಹಸೆ ಚಿತ್ತಾರ ಕ್ಯಾಲೆಂಡರ್ ಬಿಡುಗಡೆಗೊಳಿದ ಮಾಜಿ ಸಭಾಪತಿ ಡಾ. ಕಾಗೋಡು ತಿಮ್ಮಪ್ಪ,’ನಮ್ಮ ಹೊಸ ತಲೆಮಾರು ಇಂತಹ ಕ್ಯಾಲೆಂಡರ್ ಮೂಲಕ ಸಂಸ್ಕೃತಿಯನ್ನು ಉಳಿಸುತ್ತಿರುವುದು ಮತ್ತು ಹಿಂದೆ ನಡೆದ ಹೋರಾಟಗಳನ್ನು ಕ್ಯಾಲೆಂಡರ್ ಮುಖಾಂತರ ಸ್ಮರಿಸುತ್ತಿರುವುದು ಶ್ಲಾಘನೀಯ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ದೀವರು ಹಸೆ ಚಿತ್ತಾರ ಕಲಾವಿದೆಯರಾದ ಲಕ್ಷ್ಮಮ್ಮ ಗಡೆಮನೆ, ರಾದಾ ಸುಳ್ಳೂರು, ಸ್ವಾತಿ ಪುನೀತ್ ಹಾಗೂ ಪವಿತ್ರಾ ಮೋಹನ್ ನಾಯ್ಕ್ ಅವರನ್ನು ವೇದಿಕೆಯಲ್ಲಿ ಗೌರವಿಸಲಾಯಿತು.

ರೈತ ಹೋರಾಟಗಾರ ಶಿವಾನಂದ ಕುಗ್ವೆ, ಈಶ್ವರನಾಯ್ಕ, ಎಸ್.ಪಿ ಕೆರಿಯಪ್ಪ, ಸಂಧ್ಯಾ ಸಿಗಂದೂರು, ವಿದ್ಯಾ ಸುಳ್ಳಳ್ಳಿ ಉಪಸ್ಥಿತರಿದ್ದರು.

ದಿವ್ಯಶ್ರೀ ಅದರಂತೆ ಕಾರ್ಯಕ್ರಮ ನಿರ್ವಹಣೆ ಮಾಡಿದರು. ಸಂಸ್ಥೆಯ ಸಂಚಾಲಕ ವೆಂಕಟೇಶ್ ಮೆಳವರಿಗೆ ಎಲ್ಲರನ್ನು ವಂದಿಸಿದರು.

📢 ನಿಮ್ಮೂರ ಸುದ್ದಿಗಳನ್ನು ಇಮೇಲ್ ಮಾಡಿ

shivamoggaherald@gmail.com ಅಥವಾ ವಾಟ್ಸಾಪ್ ಸಂಖ್ಯೆಗೆ ಕಳುಹಿಸಿ ಕೊಡಿ.

📞 9113834502

ನೀವು ಇನ್ನೂ 'ಶಿವಮೊಗ್ಗ ಹೆರಾಲ್ಡ್' ವಾಟ್ಸಾಪ್ ಗುಂಪು ಸೇರಿಲ್ವ?

✅ ಈಗಲೇ ವಾಟ್ಸಾಪ್ ಗುಂಪು ಸೇರಿ

'Facebook' ನಲ್ಲಿ ಸುದ್ದಿ ಓದಲು ಈ ಲಿಂಕ್ ಕ್ಲಿಕ್ ಮಾಡಿ

👍 Facebook ನಲ್ಲಿ ಫಾಲೋ ಮಾಡಿ
Share
Written by
Shivamogga herald

'ಮಾಧ್ಯಮಗಳು ಸುಳ್ಳು ಸುದ್ದಿ ನಿಪುಣತೆಯಲ್ಲಿ ಮುಂಚೂಣಿಯಲ್ಲಿವೆ.' ಪತ್ರಕರ್ತರು ಪೂರಕ ಮಾಹಿತಿಯನ್ನು ಸಂಪಾದಿಸದೆ, ಅರೆಬರೆ ಬೆಂದ ಸುದ್ದಿಯ ಮಾಹಿತಿಯನ್ನು ಸಮಾಜಕ್ಕೆ ಹಂಚುವ ಮೂಲಕ ತಪ್ಪು ಸಂದೇಶ ನೀಡುತ್ತಿದ್ದಾರೆ. ಇದು ಸರಿಯಾದ ನಿಲುವಲ್ಲ'- ಹೀಗೊಂದು ಅಪವಾದ ಪತ್ರಕರ್ತರು ಹಾಗೂ ಪತ್ರಿಕೋದ್ಯಮದ ಮೇಲಿದೆ. ಆದ್ದರಿಂದ, ಇಲ್ಲಿ ನಮ್ಮ ಸ್ವಂತ ಅಭಿಪ್ರಾಯಗಳಿಗೆ ಸ್ಥಾನ ನೀಡಲು ಇಚ್ಛಿಸುವುದಿಲ್ಲ. ಓದುಗರಿಗೆ ಸತ್ಯ ಹಾಗೂ ನಿಖರತೆಯ ಸುದ್ದಿಯೊಂದಿಗೆ ಸುದ್ದಿಯಾಗಿ ಮಾತ್ರ ಕೊಡಲು ಬಯಸುತ್ತೇವೆ. ಇದೊಂದು ಮೈಲಿ ಗಲ್ಲು ಸಮಾಜವನ್ನು ಎಚ್ಚರಿಸುವ ಹಾಗೂ ಸಮ ಸಮಾಜ ಕಟ್ಟುವ ಕಾರ್ಯಕ್ಕೆ ಅಡಿಪಾಯ ಆಗಲಿದೆ ಎನ್ನುವ ವಿಶ್ವಾಸದೊಂದಿಗೆ 'ಶಿವಮೊಗ್ಗ ಹೆರಾಲ್ಡ್' ಡಿಜಿಟಲ್ ಮಾಧ್ಯಮ ಕಟ್ಟಿದ್ದೇವೆ. ಸ್ಥಳೀಯ ಸುದ್ದಿಗಳಿಗೆ ನಮ್ಮ ಮೊದಲ ಆದ್ಯತೆ. ಮಾಹಿತಿ ಹಾಗೂ ಸಲಹೆಗೆ ದೂರವಾಣಿ/ ವಾಟ್ಸಾಪ್ ಸಂಖ್ಯೆ: 9113834502, 8197788460 ಸಂಪರ್ಕಿಸಬಹುದು.

Leave a comment

Leave a Reply

Your email address will not be published. Required fields are marked *