Home Shivamogga News ಎಸ್. ಬಂಗಾರಪ್ಪ ಹುಟ್ಟು ಹಬ್ಬ: ನಾಲ್ವರಿಗೆ‘ಬಂಗಾರ’ ಪ್ರಶಸ್ತಿ ಪ್ರದಾನ, ಎಲ್ಲಿ? ಯಾವಾಗ?
Shivamogga News

ಎಸ್. ಬಂಗಾರಪ್ಪ ಹುಟ್ಟು ಹಬ್ಬ: ನಾಲ್ವರಿಗೆ‘ಬಂಗಾರ’ ಪ್ರಶಸ್ತಿ ಪ್ರದಾನ, ಎಲ್ಲಿ? ಯಾವಾಗ?

Share
Share

ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರ 94ನೇ ಜನ್ಮದಿನೋತ್ಸವದ ಅಂಗವಾಗಿ ಎಸ್. ಬಂಗಾರಪ್ಪ ವಿಚಾರ ವೇದಿಕೆ ಹಾಗೂ ಎಸ್. ಬಂಗಾರಪ್ಪ ಫೌಂಡೇಶನ್ ಸಂಯುಕ್ತ ಆಶ್ರಯದಲ್ಲಿ ಅ. 26ರಂದು ಸಂಜೆ 5ಕ್ಕೆ ಸೊರಬದ ಬಂಗಾರಧಾಮದಲ್ಲಿ ‘ಬಂಗಾರ’ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲಾಗಿದೆ ಎಂದು ವೇದಿಕೆಯ ಸಂಚಾಲಕ ಡಾ. ಕೆ.ವಿ. ನಾಗರಾಜ ಮೂರ್ತಿ ತಿಳಿಸಿದರು.

ನಗರದ ಪತ್ರಿಕಾ ಭವನದಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2026ನೇ ಸಾಲಿನ ಪ್ರಶಸ್ತಿಗೆ ನಾಲ್ವರನ್ನು ಆಯ್ಕೆ ಮಾಡಲಾಗಿದೆ. ಚಾಮರಾಜನಗರದ ಪ್ರೊ. ಜಿ.ಎಸ್. ಜಯದೇವ ಅವರಿಗೆ ‘ಸೇವಾ ಬಂಗಾರ’, ತುಮಕೂರಿನ ಪ್ರೊ. ನಟರಾಜ್ ಹುಳಿಯಾರ್ ಅವರಿಗೆ ‘ಸಾಹಿತ್ಯ ಬಂಗಾರ’, ಕಲಬುರಗಿಯ ಶೇಖ್ ಮಾಸ್ತರ್ ಅವರಿಗೆ ‘ರಂಗ ಬಂಗಾರ’ ಹಾಗೂ ಬೆಂಗಳೂರಿನ ಬಿ.ಸಿ. ರಮೇಶ್ ಅವರಿಗೆ ‘ಕ್ರೀಡಾ ಬಂಗಾರ’ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಪ್ರಶಸ್ತಿಯು ತಲಾ ₹1 ಲಕ್ಷ ನಗದು ಬಹುಮಾನ ಒಳಗೊಂಡಿದೆ ಎಂದರು.

ವಿಧಾನ ಪರಿಷತ್ ಸಭಾಪತಿ ಸಲೀಂ ಅಹಮದ್ ಸಮಾರಂಭ ಉದ್ಘಾಟಿಸುವರು. ಸಹಕಾರ ಸಚಿವ ಲಕ್ಷ್ಮಣ ಸಂಗಪ್ಪ ಸವದಿ ಹಾಗೂ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ. ಅಜಯ್ ಧರ್ಮಸಿಂಗ್ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಶ್ರೀ ಎಸ್. ಬಂಗಾರಪ್ಪ ವಿಚಾರ ವೇದಿಕೆಯ ಅಧ್ಯಕ್ಷ ವೇಣುಗೋಪಾಲ್ ನಾಯಕ ಹಾಗೂ ಕರ್ನಾಟಕ ನಾಟಕ ಅಕಾಡೆಮಿ ಅಧ್ಯಕ್ಷ ಡಾ. ಕೆ.ವಿ. ನಾಗರಾಜ ಮೂರ್ತಿ ಉಪಸ್ಥಿತರಿರುವರು. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಹಾಗೂ ಶ್ರೀ ಎಸ್. ಬಂಗಾರಪ್ಪ ಫೌಂಡೇಶನ್ ಅಧ್ಯಕ್ಷ ಎಸ್. ಮಧು ಬಂಗಾರಪ್ಪ ಅಧ್ಯಕ್ಷತೆ ವಹಿಸುವರು ಎಂದು ತಿಳಿಸಿದರು.

ಶ್ರೀ ಎಸ್. ಬಂಗಾರಪ್ಪ ವಿಚಾರ ವೇದಿಕೆಯ ಅಧ್ಯಕ್ಷ ವೇಣುಗೋಪಾಲ್ ನಾಯಕ ಮಾತನಾಡಿ, ಸಮಾಜವಾದಿ ಚಿಂತಕ, ಅಭಿವೃದ್ಧಿಯ ಹರಿಕಾರ ಹಾಗೂ ಬಡವರ ಬಂಧು ಎಂದೇ ಗುರುತಿಸಿಕೊಂಡಿದ್ದ ಎಸ್. ಬಂಗಾರಪ್ಪ ಅವರ ಜನ್ಮದಿನದ ಅಂಗವಾಗಿ ಹಲವು ವರ್ಷಗಳಿಂದ ವಿವಿಧ ಕ್ಷೇತ್ರಗಳ ಸಾಧಕರಿಗೆ ‘ಬಂಗಾರ’ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ. ಈ ಹಿಂದೆ ಡಾ. ಚಂದ್ರಶೇಖರ ಕಂಬಾರ, ಡಾ. ಗೊ.ರು. ಚನ್ನಬಸಪ್ಪ, ಅನಿಲ್ ಕುಂಬ್ಳೆ, ಮಮತಾ ಪೂಜಾರಿ, ತಂಬೂರಿ ಜವರಯ್ಯ, ಡಾ. ಎಚ್.ಎಸ್. ಶಿವಪ್ರಕಾಶ್ ಹಾಗೂ ಸುಕ್ರಿ ಬೊಮ್ಮಗೌಡ ಸೇರಿದಂತೆ ಹಲವು ಸಾಧಕರು ಪ್ರಶಸ್ತಿಗೆ ಭಾಜನರಾಗಿದ್ದಾರೆ ಎಂದರು.

ಸಮಾರಂಭದ ಅಂಗವಾಗಿ ರಾಜ್ಯಮಟ್ಟದ ಜಾನಪದ ಕಲಾವಿದರಿಂದ ‘ಜಾನಪದ ಝೇಂಕಾರ’ ಹಾಗೂ ಚಲನಚಿತ್ರ ಗಾಯಕರಾದ ರಮೇಶ್ ಚಂದ್ರ ಮತ್ತು ಸುಮಾ ಶಾಸ್ತ್ರಿ ಅವರಿಂದ ‘ಎದೆ ತುಂಬಿ ಹಾಡುವೆನು’ ಸಂಗೀತ ರಸಸಂಜೆ ಆಯೋಜಿಸಲಾಗಿದೆ.

ಜಾತಿ, ಧರ್ಮದ ಭೇದವಿಲ್ಲದೆ ‘ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು’ ಎಂಬ ಆಶಯದಡಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ ಎಂದು ಅವರು ತಿಳಿಸಿದರು.

ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಸಿ. ಯೋಗೀಶ್, ಎಸ್.ಕೆ. ಮರಿಯಪ್ಪ, ನಾಗರಾಜ ಗೌಡ, ಎನ್. ರಮೇಶ್, ಜಿ.ಡಿ. ಮಂಜುನಾಥ್, ಶಿವಕುಮಾರ್ ಹಾಗೂ ಕಲೀಂ ಪಾಷ, ಗೀತೇಂದ್ರ ಗೌಡ ಇದ್ದರು.

📢 ನಿಮ್ಮೂರ ಸುದ್ದಿಗಳನ್ನು ಇಮೇಲ್ ಮಾಡಿ

shivamoggaherald@gmail.com ಅಥವಾ ವಾಟ್ಸಾಪ್ ಸಂಖ್ಯೆಗೆ ಕಳುಹಿಸಿ ಕೊಡಿ.

📞 9113834502

ನೀವು ಇನ್ನೂ 'ಶಿವಮೊಗ್ಗ ಹೆರಾಲ್ಡ್' ವಾಟ್ಸಾಪ್ ಗುಂಪು ಸೇರಿಲ್ವ?

✅ ಈಗಲೇ ವಾಟ್ಸಾಪ್ ಗುಂಪು ಸೇರಿ

'Facebook' ನಲ್ಲಿ ಸುದ್ದಿ ಓದಲು ಈ ಲಿಂಕ್ ಕ್ಲಿಕ್ ಮಾಡಿ

👍 Facebook ನಲ್ಲಿ ಫಾಲೋ ಮಾಡಿ
Share
Written by
Shivamogga herald

'ಮಾಧ್ಯಮಗಳು ಸುಳ್ಳು ಸುದ್ದಿ ನಿಪುಣತೆಯಲ್ಲಿ ಮುಂಚೂಣಿಯಲ್ಲಿವೆ.' ಪತ್ರಕರ್ತರು ಪೂರಕ ಮಾಹಿತಿಯನ್ನು ಸಂಪಾದಿಸದೆ, ಅರೆಬರೆ ಬೆಂದ ಸುದ್ದಿಯ ಮಾಹಿತಿಯನ್ನು ಸಮಾಜಕ್ಕೆ ಹಂಚುವ ಮೂಲಕ ತಪ್ಪು ಸಂದೇಶ ನೀಡುತ್ತಿದ್ದಾರೆ. ಇದು ಸರಿಯಾದ ನಿಲುವಲ್ಲ'- ಹೀಗೊಂದು ಅಪವಾದ ಪತ್ರಕರ್ತರು ಹಾಗೂ ಪತ್ರಿಕೋದ್ಯಮದ ಮೇಲಿದೆ. ಆದ್ದರಿಂದ, ಇಲ್ಲಿ ನಮ್ಮ ಸ್ವಂತ ಅಭಿಪ್ರಾಯಗಳಿಗೆ ಸ್ಥಾನ ನೀಡಲು ಇಚ್ಛಿಸುವುದಿಲ್ಲ. ಓದುಗರಿಗೆ ಸತ್ಯ ಹಾಗೂ ನಿಖರತೆಯ ಸುದ್ದಿಯೊಂದಿಗೆ ಸುದ್ದಿಯಾಗಿ ಮಾತ್ರ ಕೊಡಲು ಬಯಸುತ್ತೇವೆ. ಇದೊಂದು ಮೈಲಿ ಗಲ್ಲು ಸಮಾಜವನ್ನು ಎಚ್ಚರಿಸುವ ಹಾಗೂ ಸಮ ಸಮಾಜ ಕಟ್ಟುವ ಕಾರ್ಯಕ್ಕೆ ಅಡಿಪಾಯ ಆಗಲಿದೆ ಎನ್ನುವ ವಿಶ್ವಾಸದೊಂದಿಗೆ 'ಶಿವಮೊಗ್ಗ ಹೆರಾಲ್ಡ್' ಡಿಜಿಟಲ್ ಮಾಧ್ಯಮ ಕಟ್ಟಿದ್ದೇವೆ. ಸ್ಥಳೀಯ ಸುದ್ದಿಗಳಿಗೆ ನಮ್ಮ ಮೊದಲ ಆದ್ಯತೆ. ಮಾಹಿತಿ ಹಾಗೂ ಸಲಹೆಗೆ ದೂರವಾಣಿ/ ವಾಟ್ಸಾಪ್ ಸಂಖ್ಯೆ: 9113834502, 8197788460 ಸಂಪರ್ಕಿಸಬಹುದು.

Leave a comment

Leave a Reply

Your email address will not be published. Required fields are marked *