Home ʼಹಿಂದೂಗಳೆಲ್ಲ ಒಂದೇʼಎನ್ನುವ ಬಿಜೆಪಿ, ಆರ್‌ಎಸ್‌ಎಸ್‌ ಸಿದ್ಧಾಂತ; ನೂರು ವರ್ಷದ ಕಾರ್ಯಕ್ರಮವೇನು? ಸಂವಾದಕ್ಕೆ ಕಿಮ್ಮನೆ ರತ್ನಾಕರ ಕರೆ
HomeShivamogga News

ʼಹಿಂದೂಗಳೆಲ್ಲ ಒಂದೇʼಎನ್ನುವ ಬಿಜೆಪಿ, ಆರ್‌ಎಸ್‌ಎಸ್‌ ಸಿದ್ಧಾಂತ; ನೂರು ವರ್ಷದ ಕಾರ್ಯಕ್ರಮವೇನು? ಸಂವಾದಕ್ಕೆ ಕಿಮ್ಮನೆ ರತ್ನಾಕರ ಕರೆ

Share
Share

ಶಿವಮೊಗ್ಗ:ʼನೂರು ವರ್ಷದ ಇತಿಹಾಸದಲ್ಲಿ ಹಿಂದೂ ಧರ್ಮದ ಜಾತಿ ವ್ಯವಸ್ಥೆಯಲ್ಲಿ ಬಿಜೆಪಿ ಹಾಗೂ ಆರ್‌ಎಸ್‌ಎಸ್ ಮತ್ತು ಭಜರಂಗದಳದಿಂದ ʼಹಿಂದೂ ಎಲ್ಲರೂ ಒಂದೇʼ ಎಂದು ಹೇಳಲು ಏನು ಕಾರ್ಯಕ್ರಮ ರೂಪಿಸಿದ್ದಾರೆ. ಅಶ್ಪೃತೆ ನಿವಾರಣೆಗೆ ಏನು ಮಾಡಿದ್ದಾರೆʼ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ ಪ್ರಶ್ನಿಸಿದರು.

ನಾನು ಹಿಂದೂ ಸಮಾಜದ ನ್ಯೂನತೆ ವಿರುದ್ಧವಾಗಿದ್ದು, ನನಗೆ ಹಿಂದೂ ಸಮಾಜ ಉಳಿಯಬೇಕು. ಜತೆಗೆ ಬೆಳೆಯ ಬೇಕು. ನಾನು ಹಿಂದೂ ಧರ್ಮದ ವೇದ-ಉಪನಿಷತ್ತನ್ನೂ ಕೂಡ ಓದಿದ್ದೇನೆ. ಆದರೆ, ಬಿಜೆಪಿ ಹಾಗೂ ಆರ್‌ಎಸ್‌ಎಸ್ ಸಂಘಟನೆಯವರು ಹಿಂದೂ ಧರ್ಮದಲ್ಲಿರುವ ಜಾತಿ ವ್ಯವಸ್ಥೆ ವಿರುದ್ಧ ಏನು ಮಾಡಿದ್ದಾರೆ ಉತ್ತರ ನೀಡಬೇಕು. ಈ ಬಗ್ಗೆ ಸಂವಾದ ಆಯೋಜಿಸಿ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಕರೆ ನೀಡಿದರು.

ಜಾತಿ ವ್ಯವಸ್ಥೆ ಹೋಗಲಾಡಿಸಲು ಅಂತರ್ಜಾತಿ ವಿವಾಹಕ್ಕೆ ಎಷ್ಟು ಉತ್ತೇಜನ ನೀಡಿದ್ದಾರೆ. ಜಾತಿ ವ್ಯವಸ್ಥೆ ನಿರ್ಮೂಲನೆ ಬಗ್ಗೆ ಮಹಾತ್ಮ ಗಾಂಧೀಜಿ, ಡಾ.ಬಿ.ಆರ್.ಅಂಬೇಡ್ಕರ್‌ ಸೇರಿದಂತೆ ಅನೇಕರು ಮಾತನಾಡಿದ್ದಾರೆ. ಆದರೆ, ಇಲ್ಲಿ ಬಿಜೆಪಿ ಹಾಗೂ ಆರ್‌ಎಸ್‌ಎಸ್‌ ಪಾತ್ರವೇನು ಎಂದು ಪ್ರಶ್ನಿಸಿದ ಅವರು, ಇತಿಹಾಸದ ಪುಸ್ತಕ ಓದದೇ ಕೆಲವರು ಹೇಳಿಕೆ ನೀಡುವುದು ಸರಿಯಲ್ಲ ಎಂದರು.

ಕಾಂಗ್ರೆಸ್ ಜಿಲ್ಲಾ ಘಟಕ ಅಧ್ಯಕ್ಷ ಆರ್.ಪ್ರಸನ್ನ ಕುಮಾರ್‌, ಜಿಲ್ಲ ಪಂಚಾಯಿತಿ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ, ಆದರ್ಶ ಹುಂಚದ ಕಟ್ಟೆ ಇದ್ದರು.

ʼರಾಜ್ಯಪಾಲರು ರಾಜೀನಾಮೆ ನೀಡಲಿʼ: ಕಿಮ್ಮನೆ ರತ್ನಾಕರ

ʼವಿಧಾನ ಮಂಡಲದ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲ ಥಾವರಚಂದ್‌ ಗೆಹಲೋತ್‌ ಅವರು ರಾಷ್ಟ್ರಗೀತೆ ಹೇಳದಂತೆ ಅಗೌರವದಿಂದ ಓಡಿ ಹೋಗುವ ಅವಶ್ಯಕತೆ ಏನಿತ್ತು. ರಾಜ್ಯಪಾಲರು ದೇಶದ ಮುಂದೆ ಕ್ಷಮೆ ಕೇಳುವ ಜತೆಗೆ ರಾಜಿನಾಮೆ ನೀಡಬೇಕುʼ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ ಒತ್ತಾಯಿಸಿದರು.

‘ನರೇಗಾ’ ಯೋಜನೆಗೆ ಪರ್ಯಾಯವಾಗಿ ರೂಪಿಸಿರುವ ‘ವಿಕಸಿತ ಭಾರತ– ಉದ್ಯೋಗ ಖಾತರಿ ಮತ್ತು ಜೀವನೋಪಾಯ ಮಿಷನ್‌ (ಗ್ರಾಮೀಣ) (ವಿಬಿ–ಜಿ ರಾಮ್‌ ಜಿ) ಮಸೂದೆ ಅಂಗೀಕಾರದಿಂದ ಗ್ರಾಮ ಪಂಚಾಯಿತಿಗಳ ಹಕ್ಕನ್ನು ಹತ್ತಿಕ್ಕಲಾಗುತ್ತಿದೆ. ಮುಂದಿನ ದಿನಗಳಲ್ಲಿ ಗುತ್ತಿಗೆದಾರರಿಂದ ಕೆಲಸ ಕಾರ್ಯಗಳು ನಡೆಯುತ್ತವೆ. ಇದು ಕೇಂದ್ರದ ತಪ್ಪು ನಿರ್ಧಾರ ಎಂದರು.

ದೇಶದಲ್ಲಿ ಉದ್ಯೋಗ ಸೃಷ್ಠಿಗೆ ಒತ್ತು ನೀಡುವ ಬದಲು ಜಾತಿ-ಧರ್ಮದ ಹಿನ್ನಲೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ನರೇಗಾ ಯೋಜನೆಯಿಂದ ಮಹಾತ್ಮ ಗಾಂಧೀಜಿ ಹೆಸರು ತೆಗೆಯುವ ಅನಿವಾರ್ಯತೆ ಹಾಗೂ ಕಾರಣ ಏನು? ಈ ಬಗ್ಗೆ ಖಂಡಿತಾ ಚರ್ಚೆ ಆಗಬೇಕು ಎಂದರು.

ʼಕೇಂದ್ರದ ಆರ್ಥಿಕ ನೀತಿಯಿಂದ ದೇಶ ಸಂಪೂರ್ಣ ನಾಶವಾಗಲಿದೆ. ಹಸಿವಿಗಿಂತ ದೊಡ್ಡ ಶಿಕ್ಷೆ ಇಲ್ಲ. ಇದನ್ನು ಅರ್ಥ ಮಾಡಿಕೊಂಡು ಕಾರ್ಯಕ್ರಮ ರೂಪಿಸಬೇಕು. ಇಲ್ಲಿ ಉದ್ಯೋಗ ಸೃಷ್ಠಿಗೆ ಮುಂದಾಗಬೇಕು. ಆದರೆ, ನರೇಗಾ ಯೋಜನೆ ರದ್ದು ಮಾಡುವ ಮೂಲಕ ಉದ್ಯೋಗ ಸೃಷ್ಠಿಯನ್ನು ತೆಗೆದು ಹಾಕಲಾಗಿದೆ. – ಕಿಮ್ಮನೆ ರತ್ನಾಕರ, ಮಾಜಿ ಸಚಿವ

 

 

 

📢 ನಿಮ್ಮೂರ ಸುದ್ದಿಗಳನ್ನು ಇಮೇಲ್ ಮಾಡಿ

shivamoggaherald@gmail.com ಅಥವಾ ವಾಟ್ಸಾಪ್ ಸಂಖ್ಯೆಗೆ ಕಳುಹಿಸಿ ಕೊಡಿ.

📞 9113834502

ನೀವು ಇನ್ನೂ 'ಶಿವಮೊಗ್ಗ ಹೆರಾಲ್ಡ್' ವಾಟ್ಸಾಪ್ ಗುಂಪು ಸೇರಿಲ್ವ?

✅ ಈಗಲೇ ವಾಟ್ಸಾಪ್ ಗುಂಪು ಸೇರಿ

'Facebook' ನಲ್ಲಿ ಸುದ್ದಿ ಓದಲು ಈ ಲಿಂಕ್ ಕ್ಲಿಕ್ ಮಾಡಿ

👍 Facebook ನಲ್ಲಿ ಫಾಲೋ ಮಾಡಿ
Share
Written by
Shivamogga herald

'ಮಾಧ್ಯಮಗಳು ಸುಳ್ಳು ಸುದ್ದಿ ನಿಪುಣತೆಯಲ್ಲಿ ಮುಂಚೂಣಿಯಲ್ಲಿವೆ.' ಪತ್ರಕರ್ತರು ಪೂರಕ ಮಾಹಿತಿಯನ್ನು ಸಂಪಾದಿಸದೆ, ಅರೆಬರೆ ಬೆಂದ ಸುದ್ದಿಯ ಮಾಹಿತಿಯನ್ನು ಸಮಾಜಕ್ಕೆ ಹಂಚುವ ಮೂಲಕ ತಪ್ಪು ಸಂದೇಶ ನೀಡುತ್ತಿದ್ದಾರೆ. ಇದು ಸರಿಯಾದ ನಿಲುವಲ್ಲ'- ಹೀಗೊಂದು ಅಪವಾದ ಪತ್ರಕರ್ತರು ಹಾಗೂ ಪತ್ರಿಕೋದ್ಯಮದ ಮೇಲಿದೆ. ಆದ್ದರಿಂದ, ಇಲ್ಲಿ ನಮ್ಮ ಸ್ವಂತ ಅಭಿಪ್ರಾಯಗಳಿಗೆ ಸ್ಥಾನ ನೀಡಲು ಇಚ್ಛಿಸುವುದಿಲ್ಲ. ಓದುಗರಿಗೆ ಸತ್ಯ ಹಾಗೂ ನಿಖರತೆಯ ಸುದ್ದಿಯೊಂದಿಗೆ ಸುದ್ದಿಯಾಗಿ ಮಾತ್ರ ಕೊಡಲು ಬಯಸುತ್ತೇವೆ. ಇದೊಂದು ಮೈಲಿ ಗಲ್ಲು ಸಮಾಜವನ್ನು ಎಚ್ಚರಿಸುವ ಹಾಗೂ ಸಮ ಸಮಾಜ ಕಟ್ಟುವ ಕಾರ್ಯಕ್ಕೆ ಅಡಿಪಾಯ ಆಗಲಿದೆ ಎನ್ನುವ ವಿಶ್ವಾಸದೊಂದಿಗೆ 'ಶಿವಮೊಗ್ಗ ಹೆರಾಲ್ಡ್' ಡಿಜಿಟಲ್ ಮಾಧ್ಯಮ ಕಟ್ಟಿದ್ದೇವೆ. ಸ್ಥಳೀಯ ಸುದ್ದಿಗಳಿಗೆ ನಮ್ಮ ಮೊದಲ ಆದ್ಯತೆ. ಮಾಹಿತಿ ಹಾಗೂ ಸಲಹೆಗೆ ದೂರವಾಣಿ/ ವಾಟ್ಸಾಪ್ ಸಂಖ್ಯೆ: 9113834502, 8197788460 ಸಂಪರ್ಕಿಸಬಹುದು.

Leave a comment

Leave a Reply

Your email address will not be published. Required fields are marked *