ಶಿವಮೊಗ್ಗ: ನಗರದ ಕೆಲವು ಪ್ರತಿಷ್ಠಿತ ಖಾಸಗಿ ಆಸ್ಪತ್ರೆಗಳಲ್ಲಿ ರೋಗಿಗಳಿಂದ ನಿಗದಿತ ಶುಲ್ಕಕ್ಕಿಂತ ಹೆಚ್ಚಿನ ಹಣ ವಸೂಲಿ ಮಾಡಲಾಗುತ್ತಿದೆ ಎಂಬ ಆರೋಪಗಳು ಕೇಳಿಬಂದಿದ್ದು, ಈ ಬಗ್ಗೆ ಜಿಲ್ಲಾ ಆರೋಗ್ಯಾಧಿಕಾರಿ (ಡಿಎಚ್‌ಒ) ಪರಿಶೀಲನೆ ನಡೆಸಬೇಕು ಎಂದು ಮಾಜಿ ಶಾಸಕ ಕೆ.ಬಿ. ಪ್ರಸನ್ನ ಕುಮಾರ್ ಆಗ್ರಹಿಸಿದರು.
ಬಿಪಿಎಲ್ ಕಾರ್ಡ್ ಹೊಂದಿರುವ ರೋಗಿಗಳಿಂದಲೂ ಆಂಜಿಯೋಗ್ರಾಂ ಚಿಕಿತ್ಸೆಗೆ ₹25 ಸಾವಿರ ವಸೂಲಿ ಮಾಡಲಾಗುತ್ತಿದೆ ಎಂಬ ದೂರುಗಳಿವೆ. ಈ ಕುರಿತು ಆರೋಗ್ಯ ಇಲಾಖೆ ಪರಿಶೀಲನೆ ನಡೆಸಿ, ನಿಯಮ ಉಲ್ಲಂಘನೆಯಾಗಿದ್ದರೆ ಸಂಬಂಧಿಸಿದ ಆಸ್ಪತ್ರೆಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.
ಖಾಸಗಿ ಆಸ್ಪತ್ರೆಗಳಲ್ಲಿ ವಿವಿಧ ಚಿಕಿತ್ಸೆಗೆ ನಿಗದಿಪಡಿಸಿರುವ ಶುಲ್ಕಕ್ಕಿಂತ ಹೆಚ್ಚಿನ ಮೊತ್ತವನ್ನು ರೋಗಿಗಳಿಂದ ಪಡೆಯಲಾಗುತ್ತಿದೆಯೇ ಎಂಬುದನ್ನು ಅಧಿಕಾರಿಗಳು ಪರಿಶೀಲಿಸಬೇಕು. ಬಡ ಮತ್ತು ಮಧ್ಯಮ ವರ್ಗದ ರೋಗಿಗಳಿಗೆ ಅನಗತ್ಯ ಆರ್ಥಿಕ ಹೊರೆಯಾಗದಂತೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅವರು ಹೇಳಿದರು.
ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಜಿಲ್ಲೆಯ ಜನರು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದು, ಆರೋಗ್ಯ ಕ್ಷೇತ್ರದಲ್ಲಿನ ಸಮಸ್ಯೆಗಳಿಗೂ ಸರ್ಕಾರ ಕೂಡಲೇ ಸ್ಪಂದಿಸಬೇಕು ಎಂದು ಪ್ರಸನ್ನ ಕುಮಾರ್ ಆಗ್ರಹಿಸಿದರು.
📢 ನಿಮ್ಮೂರ ಸುದ್ದಿಗಳನ್ನು ಇಮೇಲ್ ಮಾಡಿ
shivamoggaherald@gmail.com ಅಥವಾ ವಾಟ್ಸಾಪ್ ಸಂಖ್ಯೆಗೆ ಕಳುಹಿಸಿ ಕೊಡಿ.
ನೀವು ಇನ್ನೂ 'ಶಿವಮೊಗ್ಗ ಹೆರಾಲ್ಡ್' ವಾಟ್ಸಾಪ್ ಗುಂಪು ಸೇರಿಲ್ವ?
✅ ಈಗಲೇ ವಾಟ್ಸಾಪ್ ಗುಂಪು ಸೇರಿ'Facebook' ನಲ್ಲಿ ಸುದ್ದಿ ಓದಲು ಈ ಲಿಂಕ್ ಕ್ಲಿಕ್ ಮಾಡಿ
👍 Facebook ನಲ್ಲಿ ಫಾಲೋ ಮಾಡಿ
Leave a comment