Home ‘ಆತಂಕ ಬೇಡ, ಒಕ್ಕಲೆಬ್ಬಿಸುವ ಪ್ರಶ್ನೆಯೇ ಇಲ್ಲ: ಯಡಮನೆ ಭಾಗದ ರೈತರಿಗೆ ಸಚಿವ ಮಧು ಬಂಗಾರಪ್ಪ ಅಭಯ’
HomeTaluk News

‘ಆತಂಕ ಬೇಡ, ಒಕ್ಕಲೆಬ್ಬಿಸುವ ಪ್ರಶ್ನೆಯೇ ಇಲ್ಲ: ಯಡಮನೆ ಭಾಗದ ರೈತರಿಗೆ ಸಚಿವ ಮಧು ಬಂಗಾರಪ್ಪ ಅಭಯ’

Share
Share

ಶಿವಮೊಗ್ಗ:’ಸಾಗರ ತಾಲ್ಲೂಕಿನ ಕರೂರು ಹೋಬಳಿಯ ಯಡಮನೆ ಗ್ರಾಮದ ರೈತಾಪಿ ಕುಟುಂಬಗಳಿಗೆ ಅರಣ್ಯ ಇಲಾಖೆ ನೊಟೀಸ್ ನೀಡಿರುವ ವಿಚಾರ ನನ್ನ ಗಮನಕ್ಕೆ ಬಂದ ತಕ್ಷಣವೇ ಸೂಕ್ತ ಕ್ರಮಕ್ಕೆ ಅರಣ್ಯ ಇಲಾಖೆಗೆ ಸೂಚನೆ ನೀಡಿದ್ದೇನೆ. ಹೀಗಾಗಿ ಆತಂಕ ಬೇಡ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ನೊಟೀಸ್‌ಗಳು 2012-13ರ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೈಗೊಂಡ ತೀರ್ಮಾನಗಳು. ಹಳೆಯ ಆದೇಶದ ಅನ್ವಯ ಈಗ ಜಾರಿಯಾಗುತ್ತಿರುವುದು ಸ್ಪಷ್ಟವಾಗಿದೆ. ಕಾಂಗ್ರೆಸ್  ಸರ್ಕಾರ ರೈತರನ್ನು ಒಕ್ಕಲೆಬ್ಬಿಸುವ ಯಾವುದೇ ಉದ್ದೇಶ ಹೊಂದಿಲ್ಲ ಎಂದು ತಿಳಿಸಿದ್ದಾರೆ.

ಈಗಾಗಲೇ ನಾನು ಅರಣ್ಯ ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ನೇರವಾಗಿ ಮಾತನಾಡಿದ್ದು, ಯಾವುದೇ ಕಾರಣಕ್ಕೂ ರೈತರನ್ನು ಬಲವಂತವಾಗಿ ತೆರವುಗೊಳಿಸದಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ‌.

ಅರಣ್ಯ ಹಕ್ಕು ಕಾಯ್ದೆಯಡಿ  ಅವರು ಅರ್ಜಿ ಸಲ್ಲಿಸಿದ್ದರೂ ಸೂಕ್ತ ದಾಖಲಾತಿಗಳು ಇಲ್ಲದ ಕಾರಣ ಇವರ ಅರ್ಜಿಗಳು ಇನ್ನೂ ಊರ್ಜಿತವಾಗಿಲ್ಲ. ಈ ಕುರಿತ ಸಂಬಂಧಪಟ್ಟ ಸಮಿತಿಗಳು ಮೇಲ್ಮನವಿ ಸಲ್ಲಿಸುವ ಅಗತ್ಯವಿದೆ. ಸಂಬಂಧಪಟ್ಟ ಸಮಿತಿಗಳ ಮೂಲಕ ಈ ಅರ್ಜಿಗಳ ಮರುಪರಿಶೀಲನೆ ಮತ್ತು ಮೇಲ್ಮನವಿ ಸಲ್ಲಿಕೆಗೆ ಅಗತ್ಯ ಕ್ರಮ ವಹಿಸಲಾಗುವುದು.

ಸರ್ಕಾರವು ರೈತರ ಮತ್ತು ಸಂತ್ರಸ್ತರ ಹಿತ ಕಾಯಲು ಸಂಪೂರ್ಣವಾಗಿ ಬದ್ಧವಾಗಿದ್ದು, ಯಡಮನೆ ಗ್ರಾಮದ ಜನರು ಯಾವುದೇ ಆತಂಕಕ್ಕೆ ಒಳಗಾಗಬಾರದು ಎಂದು ತಿಳಿಸಿದ್ದಾರೆ.

📢 ನಿಮ್ಮೂರ ಸುದ್ದಿಗಳನ್ನು ಇಮೇಲ್ ಮಾಡಿ

shivamoggaherald@gmail.com ಅಥವಾ ವಾಟ್ಸಾಪ್ ಸಂಖ್ಯೆಗೆ ಕಳುಹಿಸಿ ಕೊಡಿ.

📞 9113834502

ನೀವು ಇನ್ನೂ 'ಶಿವಮೊಗ್ಗ ಹೆರಾಲ್ಡ್' ವಾಟ್ಸಾಪ್ ಗುಂಪು ಸೇರಿಲ್ವ?

✅ ಈಗಲೇ ವಾಟ್ಸಾಪ್ ಗುಂಪು ಸೇರಿ

'Facebook' ನಲ್ಲಿ ಸುದ್ದಿ ಓದಲು ಈ ಲಿಂಕ್ ಕ್ಲಿಕ್ ಮಾಡಿ

👍 Facebook ನಲ್ಲಿ ಫಾಲೋ ಮಾಡಿ
Share
Written by
Shivamogga herald

'ಮಾಧ್ಯಮಗಳು ಸುಳ್ಳು ಸುದ್ದಿ ನಿಪುಣತೆಯಲ್ಲಿ ಮುಂಚೂಣಿಯಲ್ಲಿವೆ.' ಪತ್ರಕರ್ತರು ಪೂರಕ ಮಾಹಿತಿಯನ್ನು ಸಂಪಾದಿಸದೆ, ಅರೆಬರೆ ಬೆಂದ ಸುದ್ದಿಯ ಮಾಹಿತಿಯನ್ನು ಸಮಾಜಕ್ಕೆ ಹಂಚುವ ಮೂಲಕ ತಪ್ಪು ಸಂದೇಶ ನೀಡುತ್ತಿದ್ದಾರೆ. ಇದು ಸರಿಯಾದ ನಿಲುವಲ್ಲ'- ಹೀಗೊಂದು ಅಪವಾದ ಪತ್ರಕರ್ತರು ಹಾಗೂ ಪತ್ರಿಕೋದ್ಯಮದ ಮೇಲಿದೆ. ಆದ್ದರಿಂದ, ಇಲ್ಲಿ ನಮ್ಮ ಸ್ವಂತ ಅಭಿಪ್ರಾಯಗಳಿಗೆ ಸ್ಥಾನ ನೀಡಲು ಇಚ್ಛಿಸುವುದಿಲ್ಲ. ಓದುಗರಿಗೆ ಸತ್ಯ ಹಾಗೂ ನಿಖರತೆಯ ಸುದ್ದಿಯೊಂದಿಗೆ ಸುದ್ದಿಯಾಗಿ ಮಾತ್ರ ಕೊಡಲು ಬಯಸುತ್ತೇವೆ. ಇದೊಂದು ಮೈಲಿ ಗಲ್ಲು ಸಮಾಜವನ್ನು ಎಚ್ಚರಿಸುವ ಹಾಗೂ ಸಮ ಸಮಾಜ ಕಟ್ಟುವ ಕಾರ್ಯಕ್ಕೆ ಅಡಿಪಾಯ ಆಗಲಿದೆ ಎನ್ನುವ ವಿಶ್ವಾಸದೊಂದಿಗೆ 'ಶಿವಮೊಗ್ಗ ಹೆರಾಲ್ಡ್' ಡಿಜಿಟಲ್ ಮಾಧ್ಯಮ ಕಟ್ಟಿದ್ದೇವೆ. ಸ್ಥಳೀಯ ಸುದ್ದಿಗಳಿಗೆ ನಮ್ಮ ಮೊದಲ ಆದ್ಯತೆ. ಮಾಹಿತಿ ಹಾಗೂ ಸಲಹೆಗೆ ದೂರವಾಣಿ/ ವಾಟ್ಸಾಪ್ ಸಂಖ್ಯೆ: 9113834502, 8197788460 ಸಂಪರ್ಕಿಸಬಹುದು.

Leave a comment

Leave a Reply

Your email address will not be published. Required fields are marked *