Home ಸೆ.28, 29ರಂದು ಮಧು ಬಂಗಾರಪ್ಪ ಸೊರಬ ಪ್ರವಾಸ
HomeShivamogga News

ಸೆ.28, 29ರಂದು ಮಧು ಬಂಗಾರಪ್ಪ ಸೊರಬ ಪ್ರವಾಸ

Share
Share

ಶಿವಮೊಗ್ಗ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ಅವರು ಸೆ.28 ಮತ್ತು 29ರಂದು ಜಿಲ್ಲೆಯ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

ಸೆ.28ರಂದು ಬೆಳಿಗ್ಗೆ 9 ಗಂಟೆಗೆ ಶಿಕಾರಿಪುರಕ್ಕೆ ಆಗಮಿಸಲಿರುವ ಸಚಿವರು, 10.15ಕ್ಕೆ ಭಾರತ್ ಜೋಡೋ ಕಾರ್ಯಕ್ರಮದ ಸ್ಥಳ ವೀಕ್ಷಣೆ ಹಾಗೂ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಲಿದ್ದಾರೆ. 11.30ಕ್ಕೆ ಶಿರಸಿಗೆ ತೆರಳಿ ಗಣಪತಿ ಟಿ. ನಾಯ್ಕ್ ಮಳಲಗಾಂವ ಚಾರಿಟೇಬಲ್ ಟ್ರಸ್ಟ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಬಳಿಕ ಸೊರಬ ತಾಲ್ಲೂಕಿಗೆ ಆಗಮಿಸಲಿದ್ದು, ಮಧ್ಯಾಹ್ನ 1.30ಕ್ಕೆ ಹಿರೇಕಲಗೋಡು ಗ್ರಾಮದಲ್ಲಿ ರಸ್ತೆ ಹಾಗೂ ಸೇತುವೆ ನಿರ್ಮಾಣ ಕಾಮಗಾರಿಗಳಿಗೆ ಗುದ್ದಲಿಪೂಜೆ ನೆರವೇರಿಸಲಿದ್ದಾರೆ. ಸಂಜೆ 4 ಗಂಟೆಗೆ ಅಂಕರವಳ್ಳಿ ಗ್ರಾಮದಲ್ಲಿ ರಸ್ತೆ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಲಿದ್ದಾರೆ. ಬಳಿಕ ಸೊರಬದಲ್ಲಿ ವಾಸ್ತವ್ಯ ಮಾಡಲಿದ್ದಾರೆ.

ಸೆ.29ರಂದು ಬೆಳಿಗ್ಗೆ 10 ಗಂಟೆಗೆ ಸೊರಬ ರಂಗಮಂದಿರದಲ್ಲಿ ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಹಾಗೂ ನಿವೃತ್ತ ಮತ್ತು ಪ್ರಶಸ್ತಿ ಪುರಸ್ಕೃತ ಶಿಕ್ಷಕರ ಸನ್ಮಾನ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.

ಮಧ್ಯಾಹ್ನ 12 ಗಂಟೆಗೆ ದೇವತಿಕೊಪ್ಪದಲ್ಲಿ ರಸ್ತೆ ಕಾಮಗಾರಿಗೆ, 2.30ಕ್ಕೆ ಕುಂಬತ್ತಿಯಲ್ಲಿ ರಸ್ತೆ ಕಾಮಗಾರಿಗೆ ಹಾಗೂ ಸಂಜೆ 4 ಗಂಟೆಗೆ ಮಳಲಿಕೊಪ್ಪದಲ್ಲಿ ರಸ್ತೆ ಡಾಂಬರೀಕರಣ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಲಿದ್ದಾರೆ.

ಸಚಿವರ ವಿಶೇಷ ಕರ್ತವ್ಯ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

📢 ನಿಮ್ಮೂರ ಸುದ್ದಿಗಳನ್ನು ಇಮೇಲ್ ಮಾಡಿ

shivamoggaherald@gmail.com ಅಥವಾ ವಾಟ್ಸಾಪ್ ಸಂಖ್ಯೆಗೆ ಕಳುಹಿಸಿ ಕೊಡಿ.

📞 9113834502

ನೀವು ಇನ್ನೂ 'ಶಿವಮೊಗ್ಗ ಹೆರಾಲ್ಡ್' ವಾಟ್ಸಾಪ್ ಗುಂಪು ಸೇರಿಲ್ವ?

✅ ಈಗಲೇ ವಾಟ್ಸಾಪ್ ಗುಂಪು ಸೇರಿ

'Facebook' ನಲ್ಲಿ ಸುದ್ದಿ ಓದಲು ಈ ಲಿಂಕ್ ಕ್ಲಿಕ್ ಮಾಡಿ

👍 Facebook ನಲ್ಲಿ ಫಾಲೋ ಮಾಡಿ
Share
Written by
Shivamogga herald

'ಮಾಧ್ಯಮಗಳು ಸುಳ್ಳು ಸುದ್ದಿ ನಿಪುಣತೆಯಲ್ಲಿ ಮುಂಚೂಣಿಯಲ್ಲಿವೆ.' ಪತ್ರಕರ್ತರು ಪೂರಕ ಮಾಹಿತಿಯನ್ನು ಸಂಪಾದಿಸದೆ, ಅರೆಬರೆ ಬೆಂದ ಸುದ್ದಿಯ ಮಾಹಿತಿಯನ್ನು ಸಮಾಜಕ್ಕೆ ಹಂಚುವ ಮೂಲಕ ತಪ್ಪು ಸಂದೇಶ ನೀಡುತ್ತಿದ್ದಾರೆ. ಇದು ಸರಿಯಾದ ನಿಲುವಲ್ಲ'- ಹೀಗೊಂದು ಅಪವಾದ ಪತ್ರಕರ್ತರು ಹಾಗೂ ಪತ್ರಿಕೋದ್ಯಮದ ಮೇಲಿದೆ. ಆದ್ದರಿಂದ, ಇಲ್ಲಿ ನಮ್ಮ ಸ್ವಂತ ಅಭಿಪ್ರಾಯಗಳಿಗೆ ಸ್ಥಾನ ನೀಡಲು ಇಚ್ಛಿಸುವುದಿಲ್ಲ. ಓದುಗರಿಗೆ ಸತ್ಯ ಹಾಗೂ ನಿಖರತೆಯ ಸುದ್ದಿಯೊಂದಿಗೆ ಸುದ್ದಿಯಾಗಿ ಮಾತ್ರ ಕೊಡಲು ಬಯಸುತ್ತೇವೆ. ಇದೊಂದು ಮೈಲಿ ಗಲ್ಲು ಸಮಾಜವನ್ನು ಎಚ್ಚರಿಸುವ ಹಾಗೂ ಸಮ ಸಮಾಜ ಕಟ್ಟುವ ಕಾರ್ಯಕ್ಕೆ ಅಡಿಪಾಯ ಆಗಲಿದೆ ಎನ್ನುವ ವಿಶ್ವಾಸದೊಂದಿಗೆ 'ಶಿವಮೊಗ್ಗ ಹೆರಾಲ್ಡ್' ಡಿಜಿಟಲ್ ಮಾಧ್ಯಮ ಕಟ್ಟಿದ್ದೇವೆ. ಸ್ಥಳೀಯ ಸುದ್ದಿಗಳಿಗೆ ನಮ್ಮ ಮೊದಲ ಆದ್ಯತೆ. ಮಾಹಿತಿ ಹಾಗೂ ಸಲಹೆಗೆ ದೂರವಾಣಿ/ ವಾಟ್ಸಾಪ್ ಸಂಖ್ಯೆ: 9113834502, 8197788460 ಸಂಪರ್ಕಿಸಬಹುದು.

Leave a comment

Leave a Reply

Your email address will not be published. Required fields are marked *