Home Shivamogga News ‘ಅರಣ್ಯ ಕೈಗಾರಿಕೆ ನಿಗಮದ ರಾಜ್ಯ ಅಧ್ಯಕ್ಷರಾಗಿ ಶಾಸಕ ಗೋಪಾಲಕೃಷ್ಣ ಬೇಳೂರು, KRIDL ಅಧ್ಯಕ್ಷರಾಗಿ ಬಿ.ಕೆ.ಸಂಗಮೇಶ ಮುಂದುವರಿಕೆ’: ಸರ್ಕಾರ ಆದೇಶ
Shivamogga News

‘ಅರಣ್ಯ ಕೈಗಾರಿಕೆ ನಿಗಮದ ರಾಜ್ಯ ಅಧ್ಯಕ್ಷರಾಗಿ ಶಾಸಕ ಗೋಪಾಲಕೃಷ್ಣ ಬೇಳೂರು, KRIDL ಅಧ್ಯಕ್ಷರಾಗಿ ಬಿ.ಕೆ.ಸಂಗಮೇಶ ಮುಂದುವರಿಕೆ’: ಸರ್ಕಾರ ಆದೇಶ

Share
Share

ಶಿವಮೊಗ್ಗ:’ಸಾಗರ ವಿಧಾನ ಸಭಾ ಕ್ಷೇತ್ರದ ಶಾಸಕ  ಗೋಪಾಲಕೃಷ್ಣ ಬೇಳೂರು ಹಾಗೂ ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ ಅವರನ್ನು ನಿಗಮ ಮಂಡಳಿ ಅಧ್ಯಕ್ಷರಾಗಿ ಮುಂದುವರೆಯುವಂತೆ ಸರ್ಕಾರ ಆದೇಶ ಹೊರಡಿಸಿದೆ.’

2024ರ ಜನವರಿ 26 ರಿಂದ ಶಾಸಕ ಬೇಳೂರು ಗೋಪಾಲಕೃಷ್ಣ ಅವರನ್ನು ಮುಂದಿನ ಎರಡು ವರ್ಷಗಳ ಅವಧಿಗೆ ಅಥವಾ ಮುಂದಿನ ಆದೇಶದವರೆಗೆ ರಾಜ್ಯ ಅರಣ್ಯ ಕೈಗಾರಿಕೆ ನಿಗಮ (KSFIC) ನಿಯಮಿತದ ಅಧ್ಯಕ್ಷರನ್ನಾಗಿ ನೇಮಕಗೊಳಿಸಿ ಸರ್ಕಾರ ಆದೇಶಿಸಿತ್ತು. ಈ ಆದೇಶ ಇದೇ ಜನವರಿ 26 ಕ್ಕೆ ಮುಕ್ತಾಯಗೊಂಡಿತ್ತು.

ಇದೀಗ 2026ರ ಜನವರಿ 26 ರಿಂದ ಜಾರಿಗೆ ಬರುವಂತೆ ಮುಂದುವರೆಸಿ ರಾಜ್ಯ ಸರ್ಕಾರ ಆದೇಶಿಸಿದೆ.

ಅದೇ ರೀತಿ, ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ ಅವರನ್ನು ಗ್ರಾಮೀಣ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ನಿಗಮ/ಲ್ಯಾಂಡ್ ಆರ್ಮಿ ರಾಜ್ಯ ಅಧ್ಯಕ್ಷರಾಗಿ ಮುಂದುವರೆಯುವಂತೆ ಆದೇಶ ಹೊರಡಿಸಿದ್ದು, ಸಚಿವ ಸಂಪುಟ ದರ್ಜೆಯ ಸ್ಥಾನಮಾನದೊಂದಿಗೆ ಅಂದರೆ, ಸಚಿವ ಸಂಪುಟ ದರ್ಜೆಯ ಸಚಿವರಿಗೆ ನೀಡುವ ಎಲ್ಲ ಸೌಲಭ್ಯಗಳನ್ನು ಮುಂದುವರೆಸಿ ಆದೇಶ ಹೊರಡಿಸಿದೆ.

📢 ನಿಮ್ಮೂರ ಸುದ್ದಿಗಳನ್ನು ಇಮೇಲ್ ಮಾಡಿ

shivamoggaherald@gmail.com ಅಥವಾ ವಾಟ್ಸಾಪ್ ಸಂಖ್ಯೆಗೆ ಕಳುಹಿಸಿ ಕೊಡಿ.

📞 9113834502

ನೀವು ಇನ್ನೂ 'ಶಿವಮೊಗ್ಗ ಹೆರಾಲ್ಡ್' ವಾಟ್ಸಾಪ್ ಗುಂಪು ಸೇರಿಲ್ವ?

✅ ಈಗಲೇ ವಾಟ್ಸಾಪ್ ಗುಂಪು ಸೇರಿ

'Facebook' ನಲ್ಲಿ ಸುದ್ದಿ ಓದಲು ಈ ಲಿಂಕ್ ಕ್ಲಿಕ್ ಮಾಡಿ

👍 Facebook ನಲ್ಲಿ ಫಾಲೋ ಮಾಡಿ
Share
Written by
Shivamogga herald

'ಮಾಧ್ಯಮಗಳು ಸುಳ್ಳು ಸುದ್ದಿ ನಿಪುಣತೆಯಲ್ಲಿ ಮುಂಚೂಣಿಯಲ್ಲಿವೆ.' ಪತ್ರಕರ್ತರು ಪೂರಕ ಮಾಹಿತಿಯನ್ನು ಸಂಪಾದಿಸದೆ, ಅರೆಬರೆ ಬೆಂದ ಸುದ್ದಿಯ ಮಾಹಿತಿಯನ್ನು ಸಮಾಜಕ್ಕೆ ಹಂಚುವ ಮೂಲಕ ತಪ್ಪು ಸಂದೇಶ ನೀಡುತ್ತಿದ್ದಾರೆ. ಇದು ಸರಿಯಾದ ನಿಲುವಲ್ಲ'- ಹೀಗೊಂದು ಅಪವಾದ ಪತ್ರಕರ್ತರು ಹಾಗೂ ಪತ್ರಿಕೋದ್ಯಮದ ಮೇಲಿದೆ. ಆದ್ದರಿಂದ, ಇಲ್ಲಿ ನಮ್ಮ ಸ್ವಂತ ಅಭಿಪ್ರಾಯಗಳಿಗೆ ಸ್ಥಾನ ನೀಡಲು ಇಚ್ಛಿಸುವುದಿಲ್ಲ. ಓದುಗರಿಗೆ ಸತ್ಯ ಹಾಗೂ ನಿಖರತೆಯ ಸುದ್ದಿಯೊಂದಿಗೆ ಸುದ್ದಿಯಾಗಿ ಮಾತ್ರ ಕೊಡಲು ಬಯಸುತ್ತೇವೆ. ಇದೊಂದು ಮೈಲಿ ಗಲ್ಲು ಸಮಾಜವನ್ನು ಎಚ್ಚರಿಸುವ ಹಾಗೂ ಸಮ ಸಮಾಜ ಕಟ್ಟುವ ಕಾರ್ಯಕ್ಕೆ ಅಡಿಪಾಯ ಆಗಲಿದೆ ಎನ್ನುವ ವಿಶ್ವಾಸದೊಂದಿಗೆ 'ಶಿವಮೊಗ್ಗ ಹೆರಾಲ್ಡ್' ಡಿಜಿಟಲ್ ಮಾಧ್ಯಮ ಕಟ್ಟಿದ್ದೇವೆ. ಸ್ಥಳೀಯ ಸುದ್ದಿಗಳಿಗೆ ನಮ್ಮ ಮೊದಲ ಆದ್ಯತೆ. ಮಾಹಿತಿ ಹಾಗೂ ಸಲಹೆಗೆ ದೂರವಾಣಿ/ ವಾಟ್ಸಾಪ್ ಸಂಖ್ಯೆ: 9113834502, 8197788460 ಸಂಪರ್ಕಿಸಬಹುದು.

Leave a comment

Leave a Reply

Your email address will not be published. Required fields are marked *