Home Shivamogga News ಮಂಗನ ಕಾಯಿಲೆ: ತೀರ್ಥಹಳ್ಳಿಯ ಯುವಕ ಬಲಿ’
Shivamogga NewsCrimeTaluk News

ಮಂಗನ ಕಾಯಿಲೆ: ತೀರ್ಥಹಳ್ಳಿಯ ಯುವಕ ಬಲಿ’

Share
Share

ಶಿವಮೊಗ್ಗ:’ಮಂಗನ ಕಾಯಿಲೆಯಿಂದ (ಕೆಎಫ್ ಡಿ) ತೀರ್ಥಹಳ್ಳಿ ತಾಲ್ಲೂಕಿನ ಕಟಗಾರು ಗ್ರಾಮದ 29 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.

ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವನಪ್ಪಿದ್ದು, ಜನವರಿ 20 ರಿಂದ ವ್ಯಕ್ತಿಯು ತೀವ್ರ ಜ್ವರದಿಂದ ಬಳಲುತ್ತಿದ್ದರು. ಸ್ಥಳೀಯವಾಗಿ ಚಿಕಿತ್ಸೆ ಪಡೆದರೂ ಜ್ವರದ ತೀವ್ರತೆ ಕಡಿಮೆಯಾಗಿರಲಿಲ್ಲ.

ಕಳೆದ ಭಾನುವಾರ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿಯ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಬುಧವಾರ ಕೊನೆಯುಸಿರೆಳೆದಿದ್ದಾರೆ.

ಜಿಲ್ಲಾ ಆರೋಗ್ಯ ಇಲಾಖೆಯು ಈಗಾಗಲೇ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದು, ಕಟಗಾರು ಮತ್ತು ಸುತ್ತಮುತ್ತಲ ಗ್ರಾಮಗಳಲ್ಲಿ ಜ್ವರದ ಲಕ್ಷಣವಿರುವವರ ತಪಾಸಣೆಗೆ ಸೂಚಿಸಿದೆ. ಮಂಗಗಳು ಸತ್ತಿರುವುದು ಕಂಡುಬಂದಲ್ಲಿ ಕೂಡಲೇ ಮಾಹಿತಿ ನೀಡುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಲಾಗಿದೆ. (ಕೆಎಫ್‌ಡಿ ಸೋಂಕಿತರ ಹೆಸರು ಬಹಿರಂಗಪಡಿಸುವಂತಿಲ್ಲ).

📢 ನಿಮ್ಮೂರ ಸುದ್ದಿಗಳನ್ನು ಇಮೇಲ್ ಮಾಡಿ

shivamoggaherald@gmail.com ಅಥವಾ ವಾಟ್ಸಾಪ್ ಸಂಖ್ಯೆಗೆ ಕಳುಹಿಸಿ ಕೊಡಿ.

📞 9113834502

ನೀವು ಇನ್ನೂ 'ಶಿವಮೊಗ್ಗ ಹೆರಾಲ್ಡ್' ವಾಟ್ಸಾಪ್ ಗುಂಪು ಸೇರಿಲ್ವ?

✅ ಈಗಲೇ ವಾಟ್ಸಾಪ್ ಗುಂಪು ಸೇರಿ

'Facebook' ನಲ್ಲಿ ಸುದ್ದಿ ಓದಲು ಈ ಲಿಂಕ್ ಕ್ಲಿಕ್ ಮಾಡಿ

👍 Facebook ನಲ್ಲಿ ಫಾಲೋ ಮಾಡಿ
Share
Written by
Shivamogga herald

'ಮಾಧ್ಯಮಗಳು ಸುಳ್ಳು ಸುದ್ದಿ ನಿಪುಣತೆಯಲ್ಲಿ ಮುಂಚೂಣಿಯಲ್ಲಿವೆ.' ಪತ್ರಕರ್ತರು ಪೂರಕ ಮಾಹಿತಿಯನ್ನು ಸಂಪಾದಿಸದೆ, ಅರೆಬರೆ ಬೆಂದ ಸುದ್ದಿಯ ಮಾಹಿತಿಯನ್ನು ಸಮಾಜಕ್ಕೆ ಹಂಚುವ ಮೂಲಕ ತಪ್ಪು ಸಂದೇಶ ನೀಡುತ್ತಿದ್ದಾರೆ. ಇದು ಸರಿಯಾದ ನಿಲುವಲ್ಲ'- ಹೀಗೊಂದು ಅಪವಾದ ಪತ್ರಕರ್ತರು ಹಾಗೂ ಪತ್ರಿಕೋದ್ಯಮದ ಮೇಲಿದೆ. ಆದ್ದರಿಂದ, ಇಲ್ಲಿ ನಮ್ಮ ಸ್ವಂತ ಅಭಿಪ್ರಾಯಗಳಿಗೆ ಸ್ಥಾನ ನೀಡಲು ಇಚ್ಛಿಸುವುದಿಲ್ಲ. ಓದುಗರಿಗೆ ಸತ್ಯ ಹಾಗೂ ನಿಖರತೆಯ ಸುದ್ದಿಯೊಂದಿಗೆ ಸುದ್ದಿಯಾಗಿ ಮಾತ್ರ ಕೊಡಲು ಬಯಸುತ್ತೇವೆ. ಇದೊಂದು ಮೈಲಿ ಗಲ್ಲು ಸಮಾಜವನ್ನು ಎಚ್ಚರಿಸುವ ಹಾಗೂ ಸಮ ಸಮಾಜ ಕಟ್ಟುವ ಕಾರ್ಯಕ್ಕೆ ಅಡಿಪಾಯ ಆಗಲಿದೆ ಎನ್ನುವ ವಿಶ್ವಾಸದೊಂದಿಗೆ 'ಶಿವಮೊಗ್ಗ ಹೆರಾಲ್ಡ್' ಡಿಜಿಟಲ್ ಮಾಧ್ಯಮ ಕಟ್ಟಿದ್ದೇವೆ. ಸ್ಥಳೀಯ ಸುದ್ದಿಗಳಿಗೆ ನಮ್ಮ ಮೊದಲ ಆದ್ಯತೆ. ಮಾಹಿತಿ ಹಾಗೂ ಸಲಹೆಗೆ ದೂರವಾಣಿ/ ವಾಟ್ಸಾಪ್ ಸಂಖ್ಯೆ: 9113834502, 8197788460 ಸಂಪರ್ಕಿಸಬಹುದು.

Leave a comment

Leave a Reply

Your email address will not be published. Required fields are marked *