Home ಅರಸು ದಾಖಲೆ ಸರಿಗಟ್ಟಿದ ಸಿದ್ದರಾಮಯ್ಯ|ನಾಟಿಕೋಳಿ ಬಿರಿಯಾನಿ ವಿತರಣೆ
HomeShivamogga News

ಅರಸು ದಾಖಲೆ ಸರಿಗಟ್ಟಿದ ಸಿದ್ದರಾಮಯ್ಯ|ನಾಟಿಕೋಳಿ ಬಿರಿಯಾನಿ ವಿತರಣೆ

Share
Share

ಶಿವಮೊಗ್ಗ: ರಾಜ್ಯದಲ್ಲಿ ಸುದೀರ್ಘ ಅವಧಿಯ ಮುಖ್ಯಮಂತ್ರಿ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದ ದೇವರಾಜು ಅರಸು ಅವರ ದಾಖಲೆಯನ್ನು ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರಿಗಟ್ಟಿದ್ದು, 2,792 ದಿನ ದೀರ್ಘಾವಧಿ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದಾರೆ.

ಅದೇ ಕಾರಣಕ್ಕೆ ಸಿದ್ಧರಾಮಯ್ಯ ಅಭಿಮಾನಿಗಳಿಂದ ಮಂಗಳವಾರ (ಜ.6) ನಗರದ ಅಶೋಕ ವೃತ್ತ, ಮೆಗ್ಗಾನ್ ಆಸ್ಪತ್ರೆ ಮತ್ತು ವಿವಿಧೆಡೆ ನಾಟಿ ಕೋಳಿ ಬಿರಿಯಾನಿ ಮತ್ತು ಸಿಹಿ ಹಂಚಿ ಸಂಭ್ರಮಿಸಲಾಯಿತು.

ಕಾಂಗ್ರೆಸ್ ಜಿಲ್ಲಾ ಘಟಕ ಅಧ್ಯಕ್ಷ ಆರ್. ಪ್ರಸನ್ನಕುಮಾರ್ ಮಾತನಾಡಿ, ಸಿದ್ಧರಾಮಯ್ಯನವರಿಗೆ ರಾಜ್ಯದ ಜನರ ಆಶೀರ್ವಾದ ಇದೆ. ಎಲ್ಲಾ ಮುಖ್ಯಮಂತ್ರಿಗಳಿಗಿಂತ ಹೆಚ್ಚಿನ ಅವಧಿಯ ಮುಖ್ಯಮಂತ್ರಿಯಾಗಿ 16 ಬಾರಿ ಬಜೆಟ್ ಮಂಡನೆ ಮಾಡಿ ದಾಖಲೆ ನಿರ್ಮಿಸಿದ್ದಾರೆ ಎಂದರು.

ಗ್ಯಾರಂಟಿ ಯೋಜನೆ ಮೂಲಕ ಉಚಿತ ಅಕ್ಕಿ, ಶಕ್ತಿ ಯೋಜನೆ, ಯುವನಿಧಿ, ಗೃಹಜ್ಯೋತಿ, ಗೃಹಲಕ್ಷಿ ಯೋಜನೆಗಳಿಂದ ಜನರ ನಾಡಿ ಮಿಡಿತಕ್ಕೆ ಹತ್ತಿರವಾಗಿದ್ದಾರೆ ಎಂದರು.

ಕಾಂಗ್ರೆಸ್‌ ಮುಖಂಡ ಕೆ. ರಂಗನಾಥ್ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಭಿಮಾನಿಗಳಿಂದ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಲಾಯಿತು. 30 ಅಡಿ ಎತ್ತರದ ಅವರ ಕಟೌಟ್ ಗೆ ಪುಷ್ಪ ವೃಷ್ಠಿ ಸಲ್ಲಿಸಿ ಒಟ್ಟು ವಿವಿಧೆಡೆ 5 ಸಾವಿರಕ್ಕೂ ಹೆಚ್ಚು ಜನರಿಗೆ ನಾಟಿಕೋಳಿ ಬಿರಿಯಾನಿ ಮತ್ತು ಸಿಹಿ ಹಂಚಿ ಹಬ್ಬದ ವಾತಾವರಣ ಮೂಡಿಸಿದ್ದಾರೆ ಎಂದರು.

ಪ್ರಮುಖರಾದ ಕಲಗೋಡು ರತ್ನಾಕರ್, ಜಿ.ಡಿ. ಮಂಜುನಾಥ್, ಆರ್.ಸಿ. ನಾಯ್ಕ್, ನಾಗರಾಜ್ ಕಂಕಾರಿ, ಕಲೀಂ ಪಾಷಾ, ಹೆಚ್.ಪಿ. ಗಿರೀಶ್, ಸೈಯದ್ ವಾಹಿದ್ ಅಡ್ಡು, ಸುವರ್ಣಾ ನಾಗರಾಜ್, ಪಾಲಾಕ್ಷಿ, ಲೋಕೇಶ್ ವಿನಯ್ ತಾಂಡ್ಲೆ, ಶಿವಾನಂದ್, ವಿನೋದ್, ಶರತ್ ಮರಿಯಪ್ಪ, ದರ್ಶನ್, ಅಜೀಜ್ ಅಹಮ್ಮದ್, ಸಂತೋಷ್, ಆರೀಫ್, ರೇಖಾ ರಂಗನಾಥ್, ಕುಮರೇಶ್, ಪವನ್, ರಾಕೇಶ್, ಗುರುಪ್ರಸಾದ್ ಮತ್ತಿತರರು ಇದ್ದರು.

ಗ್ಯಾರಂಟಿಗಳಿಂದ ಬದುಕು ಹಸನು: ಎಂ. ಶ್ರೀಕಾಂತ್

ಹಿಂದಿನ ಅವಧಿಯಲ್ಲಿ ದೇವರಾಜ ಅರಸು ಹಾಗೂ ಪ್ರಸ್ತುತ ಸಿದ್ಧರಾಮಯ್ಯ ಅವರು ಬಡವರಿಗೆ ನೆಮ್ಮದಿ ಕೊಟ್ಟವರು. ಅವರ ಗ್ಯಾರಂಟಿ ಯೋಜನೆ ಎಲ್ಲರ ಮನೆಗೂ ಈಗಾಗಲೇ ತಲುಪಿದೆ ಎಂದು ಡಿಸಿಸಿ ಬ್ಯಾಂಕ್ ನಿರ್ದೇಶಕ ಹಾಗೂ ಕಾಂಗ್ರೆಸ್ ಮುಖಂಡರೂ ಆದ ಎಂ. ಶ್ರೀಕಾಂತ್ ಅಭಿಪ್ರಾಯಪಟ್ಟರು. 

📢 ನಿಮ್ಮೂರ ಸುದ್ದಿಗಳನ್ನು ಇಮೇಲ್ ಮಾಡಿ

shivamoggaherald@gmail.com ಅಥವಾ ವಾಟ್ಸಾಪ್ ಸಂಖ್ಯೆಗೆ ಕಳುಹಿಸಿ ಕೊಡಿ.

📞 9113834502

ನೀವು ಇನ್ನೂ 'ಶಿವಮೊಗ್ಗ ಹೆರಾಲ್ಡ್' ವಾಟ್ಸಾಪ್ ಗುಂಪು ಸೇರಿಲ್ವ?

✅ ಈಗಲೇ ವಾಟ್ಸಾಪ್ ಗುಂಪು ಸೇರಿ

'Facebook' ನಲ್ಲಿ ಸುದ್ದಿ ಓದಲು ಈ ಲಿಂಕ್ ಕ್ಲಿಕ್ ಮಾಡಿ

👍 Facebook ನಲ್ಲಿ ಫಾಲೋ ಮಾಡಿ
Share
Written by
Shivamogga herald

'ಮಾಧ್ಯಮಗಳು ಸುಳ್ಳು ಸುದ್ದಿ ನಿಪುಣತೆಯಲ್ಲಿ ಮುಂಚೂಣಿಯಲ್ಲಿವೆ.' ಪತ್ರಕರ್ತರು ಪೂರಕ ಮಾಹಿತಿಯನ್ನು ಸಂಪಾದಿಸದೆ, ಅರೆಬರೆ ಬೆಂದ ಸುದ್ದಿಯ ಮಾಹಿತಿಯನ್ನು ಸಮಾಜಕ್ಕೆ ಹಂಚುವ ಮೂಲಕ ತಪ್ಪು ಸಂದೇಶ ನೀಡುತ್ತಿದ್ದಾರೆ. ಇದು ಸರಿಯಾದ ನಿಲುವಲ್ಲ'- ಹೀಗೊಂದು ಅಪವಾದ ಪತ್ರಕರ್ತರು ಹಾಗೂ ಪತ್ರಿಕೋದ್ಯಮದ ಮೇಲಿದೆ. ಆದ್ದರಿಂದ, ಇಲ್ಲಿ ನಮ್ಮ ಸ್ವಂತ ಅಭಿಪ್ರಾಯಗಳಿಗೆ ಸ್ಥಾನ ನೀಡಲು ಇಚ್ಛಿಸುವುದಿಲ್ಲ. ಓದುಗರಿಗೆ ಸತ್ಯ ಹಾಗೂ ನಿಖರತೆಯ ಸುದ್ದಿಯೊಂದಿಗೆ ಸುದ್ದಿಯಾಗಿ ಮಾತ್ರ ಕೊಡಲು ಬಯಸುತ್ತೇವೆ. ಇದೊಂದು ಮೈಲಿ ಗಲ್ಲು ಸಮಾಜವನ್ನು ಎಚ್ಚರಿಸುವ ಹಾಗೂ ಸಮ ಸಮಾಜ ಕಟ್ಟುವ ಕಾರ್ಯಕ್ಕೆ ಅಡಿಪಾಯ ಆಗಲಿದೆ ಎನ್ನುವ ವಿಶ್ವಾಸದೊಂದಿಗೆ 'ಶಿವಮೊಗ್ಗ ಹೆರಾಲ್ಡ್' ಡಿಜಿಟಲ್ ಮಾಧ್ಯಮ ಕಟ್ಟಿದ್ದೇವೆ. ಸ್ಥಳೀಯ ಸುದ್ದಿಗಳಿಗೆ ನಮ್ಮ ಮೊದಲ ಆದ್ಯತೆ. ಮಾಹಿತಿ ಹಾಗೂ ಸಲಹೆಗೆ ದೂರವಾಣಿ/ ವಾಟ್ಸಾಪ್ ಸಂಖ್ಯೆ: 9113834502, 8197788460 ಸಂಪರ್ಕಿಸಬಹುದು.

Leave a comment

Leave a Reply

Your email address will not be published. Required fields are marked *