Home Shivamogga News ‘ಭದ್ರಾ ಯೋಜನಾ ವೃತ್ತ ಹಸ್ತಾಂತರಕ್ಕೆ ವಿರೋಧ: ರೈತರಿಂದ ಹೋರಾಟದ ಎಚ್ಚರಿಕೆ’
Shivamogga News

‘ಭದ್ರಾ ಯೋಜನಾ ವೃತ್ತ ಹಸ್ತಾಂತರಕ್ಕೆ ವಿರೋಧ: ರೈತರಿಂದ ಹೋರಾಟದ ಎಚ್ಚರಿಕೆ’

Share
Share

ಶಿವಮೊಗ್ಗ:’ಇಲ್ಲಿನ ಭದ್ರಾ ಅಣೆಕಟ್ಟು ಮತ್ತು ಭದ್ರಾ ಯೋಜನಾ ವೃತ್ತದ ಆಡಳಿತವನ್ನು ಕರ್ನಾಟಕ ನೀರಾವರಿ ನಿಗಮದಿಂದ ಬೇರ್ಪಡಿಸಿ ವಿಶ್ವೇಶ್ವರಯ್ಯ ಜಲ ಅಭಿವೃದ್ಧಿ ನಿಗಮಕ್ಕೆ ಹಸ್ತಾಂತರಿಸುವ ಸರ್ಕಾರದ ನಿರ್ಧಾರಕ್ಕೆ ಈ ಭಾಗದ ರೈತರು ಯಾವುದೇ ಕಾರಣಕ್ಕೂ ಒಪ್ಪುವುದಿಲ್ಲ’ ಎಂದು ಜಲಸಂಪನ್ಮೂಲ ಸಚಿವ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ರೈತ ಸಂಘ ಮತ್ತು ದಾವಣಗೆರೆ–ವಿಜಯನಗರ ಜಿಲ್ಲೆಗಳ ಶಾಸಕರ ನಿಯೋಗ ಮನವಿ ಸಲ್ಲಿಸಿದೆ.’

ಭದ್ರಾ ನದಿಗೆ ಅಡ್ಡಲಾಗಿ ತರೀಕೆರೆ ತಾಲ್ಲೂಕಿನ ಲಕ್ಕವಳ್ಳಿ ಗ್ರಾಮದ ಬಳಿ ಸಮುದ್ರಮಟ್ಟದಿಂದ ಸರಾಸರಿ 601 ಮೀಟರ್ ಎತ್ತರದಲ್ಲಿ ನಿರ್ಮಿಸಲಾದ ಭದ್ರಾ ಜಲಾಶಯವು 71.531 ಟಿಎಂಸಿ ಸಂಗ್ರಹಣಾ ಸಾಮರ್ಥ್ಯ ಹೊಂದಿದ್ದು, 1965ರಿಂದ ಕಾಲುವೆಗಳ ಮೂಲಕ ನೀರು ಹರಿಸಲಾಗುತ್ತಿದೆ. ಈ ಯೋಜನೆಯಿಂದ ಶಿವಮೊಗ್ಗ, ದಾವಣಗೆರೆ ಹಾಗೂ ವಿಜಯನಗರ ಜಿಲ್ಲೆಗಳ 2,53,292 ಎಕರೆ ಭೂಮಿಗೆ ಎರಡು ಬೆಳೆಗಳಿಗೆ ನೀರು ಒದಗಿಸಲಾಗುತ್ತಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಕುಡಿಯುವ ನೀರು ಮತ್ತು ಕೈಗಾರಿಕೆಗಳಿಗೂ ಸಹ ಜಲಾಶಯದಿಂದ ನೀರು ಹಂಚಿಕೆ ಮಾಡಲಾಗುತ್ತಿದೆ. ಭದ್ರಾ ಜಲಾಶಯಕ್ಕೆ ಸಂಬಂಧಪಟ್ಟಂತೆ ‘ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ’ (ಕಾಡಾ) ಕಾರ್ಯನಿರ್ವಹಿಸುತ್ತಿದ್ದು, ಅಚ್ಚುಕಟ್ಟು ಪ್ರದೇಶದ ಸಮಗ್ರ ಅಭಿವೃದ್ಧಿಗೆ ಕೆಲಸ ಮಾಡುತ್ತಿದೆ. ಆದ್ದರಿಂದ, ಯೋಜನಾ ವೃತ್ತವನ್ನು ಹಸ್ತಾಂತರಿಸದೇ, ಈಗಿರುವಂತೆಯೇ ಆಡಳಿತ ಮುಂದುವರಿಸಬೇಕು ಎಂದು ಒತ್ತಾಯಿಸಿದ್ದಾರೆ.

ಈ ವಿಚಾರದಲ್ಲಿ ಶಿವಮೊಗ್ಗ, ದಾವಣಗೆರೆ, ವಿಜಯನಗರ ಜಿಲ್ಲೆಗಳ ಉಸ್ತುವಾರಿ ಸಚಿವರು, ಶಾಸಕರು, ವಿಧಾನ ಪರಿಷತ್ ಸದಸ್ಯರು ಸೇರಿದಂತೆ ಎಲ್ಲಾ ಜನಪ್ರತಿನಿಧಿಗಳು ಒಕ್ಕೊರಲಿನಿಂದ ಭದ್ರಾ ಯೋಜನೆಯನ್ನು ಉಳಿಸಬೇಕೆಂದು ಆಗ್ರಹಿಸಿದ್ದಾರೆ. ಇಲ್ಲದಿದ್ದಲ್ಲಿ ಅಚ್ಚುಕಟ್ಟು ಪ್ರದೇಶದ ರೈತರು ಹಾಗೂ ಜನಪ್ರತಿನಿಧಿಗಳು ಸರ್ಕಾರದ ವಿರುದ್ಧ ಹೋರಾಟದ ಹಾದಿ ಹಿಡಿಯಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಡಿ.ಕೆ.ಶಿವಕುಮಾರ್ ಅವರು,’ಜಲಸಂಪನ್ಮೂಲ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆ ಕರೆದು ಸಮಾಲೋಚನೆ ನಡೆಸುವುದಾಗಿ ಸ್ಪಷ್ಟ ಭರವಸೆ ನೀಡಿದರು.

ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯ ಘಟಕ ಅಧ್ಯಕ್ಷ ಎಚ್.ಆರ್.ಬಸವರಾಜಪ್ಪ, ಶಾಸಕರಾದ ಶಾಂತನಗೌಡ (ಹೊನ್ನಾಳಿ), ಬಸವರಾಜ್ ಶಿವಗಂಗಾ (ಚನ್ನಗಿರಿ), ಬಸವಂತಪ್ಪ (ಮಾಯಕೊಂಡ) ಹಾಗೂ ಲತಾ ಮಲ್ಲಿಕಾರ್ಜುನ (ಹರಪನಹಳ್ಳಿ), ಕಾಂಗ್ರೆಸ್ ಮುಖಂಡ ಎಸ್.ಪಿ.ನಾಗರಾಜ ಗೌಡ ನಿಯೋಗದಲ್ಲಿ ಇದ್ದರು.

📢 ನಿಮ್ಮೂರ ಸುದ್ದಿಗಳನ್ನು ಇಮೇಲ್ ಮಾಡಿ

shivamoggaherald@gmail.com ಅಥವಾ ವಾಟ್ಸಾಪ್ ಸಂಖ್ಯೆಗೆ ಕಳುಹಿಸಿ ಕೊಡಿ.

📞 9113834502

ನೀವು ಇನ್ನೂ 'ಶಿವಮೊಗ್ಗ ಹೆರಾಲ್ಡ್' ವಾಟ್ಸಾಪ್ ಗುಂಪು ಸೇರಿಲ್ವ?

✅ ಈಗಲೇ ವಾಟ್ಸಾಪ್ ಗುಂಪು ಸೇರಿ

'Facebook' ನಲ್ಲಿ ಸುದ್ದಿ ಓದಲು ಈ ಲಿಂಕ್ ಕ್ಲಿಕ್ ಮಾಡಿ

👍 Facebook ನಲ್ಲಿ ಫಾಲೋ ಮಾಡಿ
Share
Written by
Shivamogga herald

'ಮಾಧ್ಯಮಗಳು ಸುಳ್ಳು ಸುದ್ದಿ ನಿಪುಣತೆಯಲ್ಲಿ ಮುಂಚೂಣಿಯಲ್ಲಿವೆ.' ಪತ್ರಕರ್ತರು ಪೂರಕ ಮಾಹಿತಿಯನ್ನು ಸಂಪಾದಿಸದೆ, ಅರೆಬರೆ ಬೆಂದ ಸುದ್ದಿಯ ಮಾಹಿತಿಯನ್ನು ಸಮಾಜಕ್ಕೆ ಹಂಚುವ ಮೂಲಕ ತಪ್ಪು ಸಂದೇಶ ನೀಡುತ್ತಿದ್ದಾರೆ. ಇದು ಸರಿಯಾದ ನಿಲುವಲ್ಲ'- ಹೀಗೊಂದು ಅಪವಾದ ಪತ್ರಕರ್ತರು ಹಾಗೂ ಪತ್ರಿಕೋದ್ಯಮದ ಮೇಲಿದೆ. ಆದ್ದರಿಂದ, ಇಲ್ಲಿ ನಮ್ಮ ಸ್ವಂತ ಅಭಿಪ್ರಾಯಗಳಿಗೆ ಸ್ಥಾನ ನೀಡಲು ಇಚ್ಛಿಸುವುದಿಲ್ಲ. ಓದುಗರಿಗೆ ಸತ್ಯ ಹಾಗೂ ನಿಖರತೆಯ ಸುದ್ದಿಯೊಂದಿಗೆ ಸುದ್ದಿಯಾಗಿ ಮಾತ್ರ ಕೊಡಲು ಬಯಸುತ್ತೇವೆ. ಇದೊಂದು ಮೈಲಿ ಗಲ್ಲು ಸಮಾಜವನ್ನು ಎಚ್ಚರಿಸುವ ಹಾಗೂ ಸಮ ಸಮಾಜ ಕಟ್ಟುವ ಕಾರ್ಯಕ್ಕೆ ಅಡಿಪಾಯ ಆಗಲಿದೆ ಎನ್ನುವ ವಿಶ್ವಾಸದೊಂದಿಗೆ 'ಶಿವಮೊಗ್ಗ ಹೆರಾಲ್ಡ್' ಡಿಜಿಟಲ್ ಮಾಧ್ಯಮ ಕಟ್ಟಿದ್ದೇವೆ. ಸ್ಥಳೀಯ ಸುದ್ದಿಗಳಿಗೆ ನಮ್ಮ ಮೊದಲ ಆದ್ಯತೆ. ಮಾಹಿತಿ ಹಾಗೂ ಸಲಹೆಗೆ ದೂರವಾಣಿ/ ವಾಟ್ಸಾಪ್ ಸಂಖ್ಯೆ: 9113834502, 8197788460 ಸಂಪರ್ಕಿಸಬಹುದು.

Leave a comment

Leave a Reply

Your email address will not be published. Required fields are marked *