ತೀರ್ಥಹಳ್ಳಿ:’ಮಾಜಿ ಮುಖ್ಯಮಂತ್ರಿ ದಿ. ಎಸ್. ಬಂಗಾರಪ್ಪ ಅವರ ಸವಿನೆನಪಿಗಾಗಿ ಫೆಬ್ರವರಿ 14 ರಂದು ಸಂಜೆ 6 ಗಂಟೆಗೆ ಹಣಗೆರೆ–ಕೆರೆಹಳ್ಳಿ ಗ್ರಾಮದಲ್ಲಿ ‘ಎಸ್. ಬಂಗಾರಪ್ಪ ಕಪ್’ ರಾಜ್ಯ ಮಟ್ಟದ ಮುಕ್ತ ವಾಲಿಬಾಲ್ ಪಂದ್ಯಾವಳಿ (ಫೆಡ್‌ಲೈಟ್) ಆಯೋಜಿಸಲಾಗಿದೆ’ ಎಂದು ಆಯೋಜಕ ಬಳಗದ ರಮೇಶ್ ಕೆರೆಹಳ್ಳಿ ತಿಳಿಸಿದ್ದಾರೆ.’
‘ಹಣಗೆರೆ ಗ್ರಾಮ ಪಂಚಾಯಿತಿ, ನಾರಾಯಣಗುರು ವಿಚಾರ ವೇದಿಕೆ, ಸ್ಥಳೀಯ ಶಾಲಾ ಮೇಲುಸ್ತುವಾರಿ ಸಮಿತಿ ಹಾಗೂ ಸ್ಥಳೀಯ ಸುತ್ತಮುತ್ತಲಿನ ಗ್ರಾಮಸ್ಥರ ಸಹಕಾರದಿಂದ, ರಮೇಶ್ ಕೆರೆಹಳ್ಳಿ (ರೆಡ್ಡಿ) ಸಾರಥ್ಯದಲ್ಲಿ ಈ ಟೂರ್ನಿ ನಡೆಯಲಿದ್ದು, ಪ್ರತಿ ವರ್ಷದಂತೆ, ಈ ಬಾರಿಯೂ ಕೂಡ ವಿಶೇಷ ರೀತಿಯಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
‘ಅದೇ ದಿನ ಬೆಳಿಗ್ಗೆ 10 ಗಂಟೆಯಿಂದ ಆರೋಗ್ಯ ತಪಾಸಣೆ ಉಚಿತ ಶಿಬಿರ ಹಾಗೂ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿದೆ. ಶಿವಮೊಗ್ಗ ನಂಜಪ್ಪ ಲೈಫ್ ಕೇರ್ ಆಸ್ಪತ್ರೆ, ಜಿಲ್ಲಾ ಮೆಗ್ಗಾನ್ ಆಸ್ಪತ್ರೆ ಹಾಗೂ ತೀರ್ಥಹಳ್ಳಿ ರಕ್ತ ನಿಧಿ ಘಟಕದ ಸಹಯೋಗದಲ್ಲಿ ರಕ್ತದಾನ ಶಿಬಿರ ನಡೆಯಲಿದೆ. ಸಾರ್ವಜನಿಕರು ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ತಿಳಿಸಿದ್ದಾರೆ.
ವಾಲಿಬಾಲ್ ಪಂದ್ಯಾವಳಿಯ ವಿಜೇತ ತಂಡಕ್ಕೆ ಪ್ರಥಮ ಬಹುಮಾನವಾಗಿ ₹30,000, ದ್ವಿತೀಯ ಬಹುಮಾನ ₹20,000, ತೃತೀಯ ₹15,000 ಹಾಗೂ ಚತುರ್ಥ ಬಹುಮಾನ ₹10,000 ನಗದು ಜೊತೆಗೆ ಆಕರ್ಷಕ ಟ್ರೋಫಿ ನೀಡಲಾಗುವುದು. ಅದೇ ರೀತಿ, ಆರ್ಥಿಕ ನೆರವು ನೀಡುವವರೂ ಸಹ ತಂಡದೊಂದಿಗೆ ಕೈ ಜೋಡಿಸಬಹುದು ಎಂದು ಮನವಿ ಮಾಡಿದ್ದಾರೆ.
ಹೆಚ್ಚಿನ ಮಾಹಿತಿಗೆ 94490 97981 ದೂರವಾಣಿಯನ್ನು ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.
📢 ನಿಮ್ಮೂರ ಸುದ್ದಿಗಳನ್ನು ಇಮೇಲ್ ಮಾಡಿ
shivamoggaherald@gmail.com ಅಥವಾ ವಾಟ್ಸಾಪ್ ಸಂಖ್ಯೆಗೆ ಕಳುಹಿಸಿ ಕೊಡಿ.
ನೀವು ಇನ್ನೂ 'ಶಿವಮೊಗ್ಗ ಹೆರಾಲ್ಡ್' ವಾಟ್ಸಾಪ್ ಗುಂಪು ಸೇರಿಲ್ವ?
✅ ಈಗಲೇ ವಾಟ್ಸಾಪ್ ಗುಂಪು ಸೇರಿ'Facebook' ನಲ್ಲಿ ಸುದ್ದಿ ಓದಲು ಈ ಲಿಂಕ್ ಕ್ಲಿಕ್ ಮಾಡಿ
👍 Facebook ನಲ್ಲಿ ಫಾಲೋ ಮಾಡಿ
Leave a comment