ಶಿವಮೊಗ್ಗ: ʼಸಾಗರ ಮಾರಿಕಾಂಬಾ ದೇವಿ ಜಾತ್ರಾ ಮಹೋತ್ಸವ ಫೆಬ್ರವರಿ 3ರಿಂದ 11ರವರೆಗೆ ನಡೆಯಲಿದೆ. ಆದ್ದರಿಂದ, ಜಾತ್ರೆಗೆ ಆಗಮಿಸುವ ಭಕ್ತಾದಿಗಳ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ವಿಶೇಷ ರೈಲು ಸೌಲಭ್ಯ ಕಲ್ಪಿಸಲು ಕ್ರಮ ಕೈಗೊಂಡಿದೆʼ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ.
ವಾರಕ್ಕೆ ಮೂರು ದಿನ ಸಂಚರಿಸುತ್ತಿರುವ ರೈಲು ಸಂಖ್ಯೆ 16581/82 (ಯಶವಂತಪುರ-ಶಿವಮೊಗ್ಗ ಟೌನ್ ಎಕ್ಸ್ ಪ್ರೆಸ್) ಅನ್ನು ಜಾತ್ರೆಯ ಅವಧಿಯಲ್ಲಿ, ಅಂದರೆ ಫೆಬ್ರವರಿ 3 ರಿಂದ 11 ರವರೆಗೆ, ಪ್ರತಿದಿನವೂ ಓಡಿಸುವಂತೆ ಹಾಗೂ ಈ ರೈಲನ್ನು ಶಿವಮೊಗ್ಗದಿಂದ ಸಾಗರದ ಸಮೀಪದ ತಾಳಗುಪ್ಪ ನಿಲ್ದಾಣದವರೆಗೆ ವಿಸ್ತರಿಸುವಂತೆ ಕೇಂದ್ರಕ್ಕೆ ಕೋರಲಾಗಿತ್ತು. ಈ ಹಿನ್ನಲೆ, ರೈಲ್ವೇ ಇಲಾಖೆಯು ಶೀಘ್ರದಲ್ಲಿಯೇ ವಿಶೇಷ ರೈಲು ಸೌಲಭ್ಯ ಕಲ್ಪಿಸುವ ಕುರಿತ ಆದೇಶ ಹೊರಡಿಸಲಿದೆ ಎಂದು ತಿಳಿಸಿದ್ದಾರೆ.
ಮೂರು ವರ್ಷಕ್ಕೊಮ್ಮೆ ನಡೆಯುವ ಈ ಐತಿಹಾಸಿಕ ಮಾರಿಕಾಂಬಾ ಜಾತ್ರೆಗೆ, ರಾಜ್ಯದ ನಾನಾ ಕಡೆಗಳಿಂದ ಅಂದಾಜು 25 ರಿಂದ 30 ಲಕ್ಷ ಭಕ್ತರು ಆಗಮಿಸುವ ನಿರೀಕ್ಷೆಯಿದ್ದು, ಸಾರ್ವಜನಿಕರ ದಟ್ಟಣೆ ನಿಯಂತ್ರಿಸಲು ಮತ್ತು ಸುಗಮ, ಸುರಕ್ಷಿತ ಪ್ರಯಾಣದ ಅನುಕೂಲ ಒದಗಿಸಲು ವಿಶೇಷ ರೈಲ್ವೆ ಸೌಲಭ್ಯ ಕಲ್ಪಿಸಲಾಗುತ್ತಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
📢 ನಿಮ್ಮೂರ ಸುದ್ದಿಗಳನ್ನು ಇಮೇಲ್ ಮಾಡಿ
shivamoggaherald@gmail.com ಅಥವಾ ವಾಟ್ಸಾಪ್ ಸಂಖ್ಯೆಗೆ ಕಳುಹಿಸಿ ಕೊಡಿ.
ನೀವು ಇನ್ನೂ 'ಶಿವಮೊಗ್ಗ ಹೆರಾಲ್ಡ್' ವಾಟ್ಸಾಪ್ ಗುಂಪು ಸೇರಿಲ್ವ?
✅ ಈಗಲೇ ವಾಟ್ಸಾಪ್ ಗುಂಪು ಸೇರಿ'Facebook' ನಲ್ಲಿ ಸುದ್ದಿ ಓದಲು ಈ ಲಿಂಕ್ ಕ್ಲಿಕ್ ಮಾಡಿ
👍 Facebook ನಲ್ಲಿ ಫಾಲೋ ಮಾಡಿ
Leave a comment