Home Taluk News ‘ಇಂದಿನಿಂದ ಸಾಗರ ಮಾರಿಕಾಂಬಾ ಜಾತ್ರೆ ಆರಂಭ: ರಾತ್ರಿಯಿಂದಲೇ ದರ್ಶನಕ್ಕೆ ಸರತಿ ಸಾಲು’
Taluk NewsCultural Events

‘ಇಂದಿನಿಂದ ಸಾಗರ ಮಾರಿಕಾಂಬಾ ಜಾತ್ರೆ ಆರಂಭ: ರಾತ್ರಿಯಿಂದಲೇ ದರ್ಶನಕ್ಕೆ ಸರತಿ ಸಾಲು’

Share
Share

ಸಾಗರ:’ರಾಜ್ಯದ ಅತಿ ದೊಡ್ಡ ಜಾತ್ರೆಗಳಲ್ಲಿ ಒಂದು ಎಂಬ ಹೆಗ್ಗಳಿಕೆಗೆ ಪಾತ್ರವಾದ ಇಲ್ಲಿನ ಮಾರಿಕಾಂಬಾ ದೇವಿಯ ಜಾತ್ರೆ ಇಂದಿನಿಂದ ಆರಂಭಗೊಂಡಿದೆ. ಫೆ.11ರವರೆಗೂ ಜಾತ್ರೆ ನಡೆಯಲಿದೆ. ಜಾತ್ರೆಗಾಗಿ ಸಾಗರ ಸಿಂಗಾರಗೊಂಡು ಸಿದ್ಧವಾಗಿದೆ.’

ತವರು ಮನೆಯಲ್ಲಿ ತಾಯಿ ದರ್ಶನ ನೀಡುತ್ತಿದ್ದು, ರಾತ್ರಿಯಿಂದಲೇ ಸಾವಿರಾರು ಜನರು ಸರತಿಯಲ್ಲಿ ನಿಂತು ದೇವಿಯನ್ನು ಕಣ್ತುಂಬಿಕೊಂಡರು.

ಸಾಗರದ ಗಣಪತಿ ದೇವಸ್ಥಾನದಲ್ಲಿ ಮಾಂಗಲ್ಯ ಪೂಜೆ, ಬ್ರಾಹ್ಮಿ ಮುಹೂರ್ತದಲ್ಲಿ ತಾಯಿಗೆ ದೃಷ್ಟಿ ಇಡುವುದು, ಮಾಂಗಲ್ಯ ಧಾರಣೆ ಕಾರ್ಯಕ್ರಮ ನಡೆಯಿತು. ಬೆಳಗಿನ ಜಾವ 3 ಗಂಟೆಗೆ ಅರ್ಚಕರ ಮನೆಯಲ್ಲಿ ಪೂಜೆ ನಡೆಯಿತು. ಬಳಿಕ ಮೆರವಣಿಗೆಯಲ್ಲಿ ದೇವಸ್ಥಾನಕ್ಕೆ ಮಂಗಳ ದ್ರವ್ಯ ತರಲಾಯಿತು. ದೇವಿಯ ತವರು ಮನೆಯಲ್ಲಿ ಉತ್ಸವ ಮೂರ್ತಿಗೆ ಆಭರಣ ತೊಡಿಸಿ ಪೂಜೆ ಸಲ್ಲಿಸಲಾಯಿತು. ತದನಂತರ ಭಕ್ತರಿಗೆ ದೇವಿಯ ದರ್ಶನಕ್ಕೆ ಅವಕಾಶ ಮಾಡಿಕೊಡಲಾಯಿತು.

‘ದರ್ಶನಕ್ಕೆ ರಾತ್ರಿಯಿಂದಲೇ ಸರತಿ’

ಮಾರಿಕಾಂಬೆಯ ದರ್ಶನಕ್ಕೆ ಕಳೆದ ರಾತ್ರಿಯಿಂದಲೆ ಭಕ್ತರು ಸರತಿಯಲ್ಲಿ ಕಾದು ಕುಳಿತಿದ್ದರು.
ರಾತ್ರಿ 10 ಗಂಟೆ ಹೊತ್ತಿಗೆ ಸಾಗರದ ಉಪ ವಿಭಾಗೀಯ ಆಸ್ಪತ್ರೆವರೆಗೆ ಸರತಿ ಸಾಲು ತಲುಪಿತ್ತು. ಮಧ್ಯರಾತ್ರಿ ಹೊತ್ತಿಗೆ ಸಾಗರ ಪೊಲೀಸ್‌ ಠಾಣೆ ವೃತ್ತದವರೆಗೆ ಸರತಿ ಸಾಲು ಇತ್ತು. ಬೆಳಿಗ್ಗೆ ದೇವಿಯ ಪ್ರಥಮ ದರ್ಶನವಾಗುತ್ತಿದ್ದಂತೆ ಭಕ್ತರು ಘೋಷಣೆಗಳನ್ನು ಕೂಗುತ್ತ ದೇವಿಗೆ ನಮಸ್ಕರಿಸಿದರು.

📢 ನಿಮ್ಮೂರ ಸುದ್ದಿಗಳನ್ನು ಇಮೇಲ್ ಮಾಡಿ

shivamoggaherald@gmail.com ಅಥವಾ ವಾಟ್ಸಾಪ್ ಸಂಖ್ಯೆಗೆ ಕಳುಹಿಸಿ ಕೊಡಿ.

📞 9113834502

ನೀವು ಇನ್ನೂ 'ಶಿವಮೊಗ್ಗ ಹೆರಾಲ್ಡ್' ವಾಟ್ಸಾಪ್ ಗುಂಪು ಸೇರಿಲ್ವ?

✅ ಈಗಲೇ ವಾಟ್ಸಾಪ್ ಗುಂಪು ಸೇರಿ

'Facebook' ನಲ್ಲಿ ಸುದ್ದಿ ಓದಲು ಈ ಲಿಂಕ್ ಕ್ಲಿಕ್ ಮಾಡಿ

👍 Facebook ನಲ್ಲಿ ಫಾಲೋ ಮಾಡಿ
Share
Written by
Shivamogga herald

'ಮಾಧ್ಯಮಗಳು ಸುಳ್ಳು ಸುದ್ದಿ ನಿಪುಣತೆಯಲ್ಲಿ ಮುಂಚೂಣಿಯಲ್ಲಿವೆ.' ಪತ್ರಕರ್ತರು ಪೂರಕ ಮಾಹಿತಿಯನ್ನು ಸಂಪಾದಿಸದೆ, ಅರೆಬರೆ ಬೆಂದ ಸುದ್ದಿಯ ಮಾಹಿತಿಯನ್ನು ಸಮಾಜಕ್ಕೆ ಹಂಚುವ ಮೂಲಕ ತಪ್ಪು ಸಂದೇಶ ನೀಡುತ್ತಿದ್ದಾರೆ. ಇದು ಸರಿಯಾದ ನಿಲುವಲ್ಲ'- ಹೀಗೊಂದು ಅಪವಾದ ಪತ್ರಕರ್ತರು ಹಾಗೂ ಪತ್ರಿಕೋದ್ಯಮದ ಮೇಲಿದೆ. ಆದ್ದರಿಂದ, ಇಲ್ಲಿ ನಮ್ಮ ಸ್ವಂತ ಅಭಿಪ್ರಾಯಗಳಿಗೆ ಸ್ಥಾನ ನೀಡಲು ಇಚ್ಛಿಸುವುದಿಲ್ಲ. ಓದುಗರಿಗೆ ಸತ್ಯ ಹಾಗೂ ನಿಖರತೆಯ ಸುದ್ದಿಯೊಂದಿಗೆ ಸುದ್ದಿಯಾಗಿ ಮಾತ್ರ ಕೊಡಲು ಬಯಸುತ್ತೇವೆ. ಇದೊಂದು ಮೈಲಿ ಗಲ್ಲು ಸಮಾಜವನ್ನು ಎಚ್ಚರಿಸುವ ಹಾಗೂ ಸಮ ಸಮಾಜ ಕಟ್ಟುವ ಕಾರ್ಯಕ್ಕೆ ಅಡಿಪಾಯ ಆಗಲಿದೆ ಎನ್ನುವ ವಿಶ್ವಾಸದೊಂದಿಗೆ 'ಶಿವಮೊಗ್ಗ ಹೆರಾಲ್ಡ್' ಡಿಜಿಟಲ್ ಮಾಧ್ಯಮ ಕಟ್ಟಿದ್ದೇವೆ. ಸ್ಥಳೀಯ ಸುದ್ದಿಗಳಿಗೆ ನಮ್ಮ ಮೊದಲ ಆದ್ಯತೆ. ಮಾಹಿತಿ ಹಾಗೂ ಸಲಹೆಗೆ ದೂರವಾಣಿ/ ವಾಟ್ಸಾಪ್ ಸಂಖ್ಯೆ: 9113834502, 8197788460 ಸಂಪರ್ಕಿಸಬಹುದು.

Leave a comment

Leave a Reply

Your email address will not be published. Required fields are marked *