Home City Roundup ಸೆ. 26ರಿಂದ ಸಕ್ರೆಬೈಲು ಆನೆ ಬಿಡಾರ ಸಾರ್ವಜನಿಕರಿಗೆ ಮುಕ್ತ
City RoundupShivamogga News

ಸೆ. 26ರಿಂದ ಸಕ್ರೆಬೈಲು ಆನೆ ಬಿಡಾರ ಸಾರ್ವಜನಿಕರಿಗೆ ಮುಕ್ತ

Share
Share

ಶಿವಮೊಗ್ಗ: ಸಕ್ರೆಬೈಲು ಆನೆ ಬಿಡಾರವನ್ನು ಸೆ.26ರಿಂದ ಸಾರ್ವಜನಿಕರ ಪ್ರವೇಶಕ್ಕೆ ಪುನರಾರಂಭಿಸಲಾಗುವುದು ಎಂದು ಅರಣ್ಯ ಇಲಾಖೆ ತಿಳಿಸಿದೆ. ಪ್ರವಾಸಿಗರ ಸುರಕ್ಷತೆಗಾಗಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡ ಬಳಿಕ ಬಿಡಾರವನ್ನು ತೆರೆಯಲಾಗುತ್ತಿದೆ.

ದುಬಾರೆ ಆನೆ ಶಿಬಿರದಲ್ಲಿ ಏ.18ರಂದು ಸಂಭವಿಸಿದ ಆಕಸ್ಮಿಕ ದುರ್ಘಟನೆಯಲ್ಲಿ ಮಹಿಳೆಯೊಬ್ಬರು ಮೃತಪಟ್ಟ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ಆನೆ ಶಿಬಿರಗಳನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿತ್ತು. ಪ್ರವಾಸಿಗರ ಸುರಕ್ಷತೆ ದೃಷ್ಟಿಯಿಂದ ಕಟ್ಟುನಿಟ್ಟಿನ ನಿಯಮಗಳು ಹಾಗೂ ಮಾರ್ಗಸೂಚಿಗಳನ್ನು ಅಳವಡಿಸಿಕೊಂಡ ಬಳಿಕ ಶಿಬಿರಗಳನ್ನು ಪುನರಾರಂಭಿಸಲು ಸೂಚಿಸಲಾಗಿತ್ತು.

ಅದರಂತೆ ಸಕ್ರೆಬೈಲು ಆನೆ ಬಿಡಾರದಲ್ಲಿ ಸಾರ್ವಜನಿಕರು ಹಾಗೂ ಆನೆಗಳಿಗೆ ಪ್ರತ್ಯೇಕ ಮಾರ್ಗಗಳನ್ನು ಗುರುತಿಸಲಾಗಿದೆ. ಸಾರ್ವಜನಿಕರು ಮತ್ತು ಆನೆಗಳ ನಡುವೆ ನೇರ ಸಂಪರ್ಕವಾಗದಂತೆ ಅಗತ್ಯ ಸುರಕ್ಷತಾ ವ್ಯವಸ್ಥೆ ಮಾಡಲಾಗಿದೆ. ಪ್ರವಾಸಿಗರ ಮಾಹಿತಿ ಹಾಗೂ ಜಾಗೃತಿಗಾಗಿ ಸೂಚನಾ ಫಲಕಗಳನ್ನು ಅಳವಡಿಸಲಾಗಿದೆ.

ಎಲ್ಲ ಸುರಕ್ಷತಾ ಕ್ರಮಗಳನ್ನು ಪೂರ್ಣಗೊಳಿಸಿರುವ ಹಿನ್ನೆಲೆಯಲ್ಲಿ ಸೆ.26ರಿಂದ ಬಿಡಾರವನ್ನು ಸಾರ್ವಜನಿಕರ ಪ್ರವೇಶಕ್ಕೆ ಅಧಿಕೃತವಾಗಿ ತೆರೆಯಲಾಗುವುದು ಎಂದು ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

📢 ನಿಮ್ಮೂರ ಸುದ್ದಿಗಳನ್ನು ಇಮೇಲ್ ಮಾಡಿ

shivamoggaherald@gmail.com ಅಥವಾ ವಾಟ್ಸಾಪ್ ಸಂಖ್ಯೆಗೆ ಕಳುಹಿಸಿ ಕೊಡಿ.

📞 9113834502

ನೀವು ಇನ್ನೂ 'ಶಿವಮೊಗ್ಗ ಹೆರಾಲ್ಡ್' ವಾಟ್ಸಾಪ್ ಗುಂಪು ಸೇರಿಲ್ವ?

✅ ಈಗಲೇ ವಾಟ್ಸಾಪ್ ಗುಂಪು ಸೇರಿ

'Facebook' ನಲ್ಲಿ ಸುದ್ದಿ ಓದಲು ಈ ಲಿಂಕ್ ಕ್ಲಿಕ್ ಮಾಡಿ

👍 Facebook ನಲ್ಲಿ ಫಾಲೋ ಮಾಡಿ
Share
Written by
Shivamogga herald

'ಮಾಧ್ಯಮಗಳು ಸುಳ್ಳು ಸುದ್ದಿ ನಿಪುಣತೆಯಲ್ಲಿ ಮುಂಚೂಣಿಯಲ್ಲಿವೆ.' ಪತ್ರಕರ್ತರು ಪೂರಕ ಮಾಹಿತಿಯನ್ನು ಸಂಪಾದಿಸದೆ, ಅರೆಬರೆ ಬೆಂದ ಸುದ್ದಿಯ ಮಾಹಿತಿಯನ್ನು ಸಮಾಜಕ್ಕೆ ಹಂಚುವ ಮೂಲಕ ತಪ್ಪು ಸಂದೇಶ ನೀಡುತ್ತಿದ್ದಾರೆ. ಇದು ಸರಿಯಾದ ನಿಲುವಲ್ಲ'- ಹೀಗೊಂದು ಅಪವಾದ ಪತ್ರಕರ್ತರು ಹಾಗೂ ಪತ್ರಿಕೋದ್ಯಮದ ಮೇಲಿದೆ. ಆದ್ದರಿಂದ, ಇಲ್ಲಿ ನಮ್ಮ ಸ್ವಂತ ಅಭಿಪ್ರಾಯಗಳಿಗೆ ಸ್ಥಾನ ನೀಡಲು ಇಚ್ಛಿಸುವುದಿಲ್ಲ. ಓದುಗರಿಗೆ ಸತ್ಯ ಹಾಗೂ ನಿಖರತೆಯ ಸುದ್ದಿಯೊಂದಿಗೆ ಸುದ್ದಿಯಾಗಿ ಮಾತ್ರ ಕೊಡಲು ಬಯಸುತ್ತೇವೆ. ಇದೊಂದು ಮೈಲಿ ಗಲ್ಲು ಸಮಾಜವನ್ನು ಎಚ್ಚರಿಸುವ ಹಾಗೂ ಸಮ ಸಮಾಜ ಕಟ್ಟುವ ಕಾರ್ಯಕ್ಕೆ ಅಡಿಪಾಯ ಆಗಲಿದೆ ಎನ್ನುವ ವಿಶ್ವಾಸದೊಂದಿಗೆ 'ಶಿವಮೊಗ್ಗ ಹೆರಾಲ್ಡ್' ಡಿಜಿಟಲ್ ಮಾಧ್ಯಮ ಕಟ್ಟಿದ್ದೇವೆ. ಸ್ಥಳೀಯ ಸುದ್ದಿಗಳಿಗೆ ನಮ್ಮ ಮೊದಲ ಆದ್ಯತೆ. ಮಾಹಿತಿ ಹಾಗೂ ಸಲಹೆಗೆ ದೂರವಾಣಿ/ ವಾಟ್ಸಾಪ್ ಸಂಖ್ಯೆ: 9113834502, 8197788460 ಸಂಪರ್ಕಿಸಬಹುದು.

Leave a comment

Leave a Reply

Your email address will not be published. Required fields are marked *