Home Shivamogga News ವಿಬಿ–ಜಿ ರಾಮ್‌ ಜಿ ಮಸೂದೆ ಅಂಗಿಕಾರ, ಭ್ರಷ್ಟಾಚಾರ ಮುಕ್ತ ಉದ್ಯೋಗ ಖಾತರಿ: ಸಂಸದ ಬಿ.ವೈ.ರಾಘವೇಂದ್ರ
Shivamogga News

ವಿಬಿ–ಜಿ ರಾಮ್‌ ಜಿ ಮಸೂದೆ ಅಂಗಿಕಾರ, ಭ್ರಷ್ಟಾಚಾರ ಮುಕ್ತ ಉದ್ಯೋಗ ಖಾತರಿ: ಸಂಸದ ಬಿ.ವೈ.ರಾಘವೇಂದ್ರ

Share
Share

ಶಿವಮೊಗ್ಗ: ಕಾಂಗ್ರೆಸ್‌ ಆಡಳಿತದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ (ಮನರೇಗಾ) ಯೋಜನೆ ಭ್ರಷ್ಟಾಚಾರದಿಂದ ಕೂಡಿತ್ತು. ಇದರಿಂದ, ಗಾಂಧೀಜಿ ಪ್ರತಿಪಾದಿಸಿದ ಆದರ್ಶಗಳನ್ನು ಬಲಿಕೊಡಲಾಗಿತ್ತು ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.

ಅದೇ ಕಾರಣಕ್ಕೆ ‘ನರೇಗಾ’ ಯೋಜನೆಗೆ ಪರ್ಯಾಯವಾಗಿ ರೂಪಿಸಿರುವ ‘ವಿಕಸಿತ ಭಾರತ– ಉದ್ಯೋಗ ಖಾತರಿ ಮತ್ತು ಜೀವನೋಪಾಯ ಮಿಷನ್‌ (ಗ್ರಾಮೀಣ) (ವಿಬಿ–ಜಿ ರಾಮ್‌ ಜಿ) ಮಸೂದೆಯನ್ನುಅಂಗೀಕರಿಸಲಾಗಿದೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಬಡವರಿಗೆ ಕೆಲಸ ಕೊಡುವ ಬದಲು ಜೆಸಿಬಿಯಲ್ಲಿ ಮಣ್ಣು ತೆಗೆದು ಗುತ್ತಿಗೆದಾರರು ಹಣ ಮಾಡಿಕೊಂಡರು. ಇಲ್ಲಿ ಬಡವರ ಕೈಗೆ ನೇರವಾಗಿ ಹಣ ಪಾವತಿ ಆಗುತ್ತಿರಲಿಲ್ಲ. ಮಧ್ಯವರ್ತಿಗಳು ಹಣ ಲೂಟಿ ಮಾಡುತ್ತಿದ್ದರು ಎಂದು ದೂರಿದರು.

ಈ ಯೋಜನೆಯಡಿ ಹಣ ಕಬಳಿಸಲು ಸಾಧ್ಯವಾಗುವುದಿಲ್ಲ ಎಂಬ ಕಾರಣದಿಂದ ಈ ಕಾಯ್ದೆಯನ್ನು ಕಾಂಗ್ರೆಸ್‌ ವಿರೋಧಿಸುತ್ತಿದೆ. ಹಿಂದಿಗಿಂತ ಈಗ, ಪೂರೈಕೆ ಆಧಾರಿತ ವ್ಯವಸ್ಥೆ ಹೆಚ್ಚು ಯೋಜಿತವಾಗಿದೆ. ‘ವಿಕಸಿತ ಗ್ರಾಮ ಪಂಚಾಯತ್ ಯೋಜನೆ’ಗಳ ಮೂಲಕ ಕೆಲಸವನ್ನು ಬ್ಲಾಕ್, ಜಿಲ್ಲೆ, ರಾಜ್ಯ ಮಟ್ಟದಲ್ಲಿ ಯೋಜನೆ ಮಾಡಿ ವಿಕಸಿತ ಭಾರತ್ ರಾಷ್ಟ್ರೀಯ ಗ್ರಾಮೀಣ ಮೂಲಸೌಕರ್ಯ ಸ್ಟಾಕ್‌ಗೆ ಸೇರಿಸಲಾಗುತ್ತದೆ ಎಂದರು.

ನಿರ್ದಿಷ್ಟ, ಅನುಮೋದಿತ ಕಾರ್ಯಭಾರದ ಆಧಾರದ ಮೇಲೆ ಕೆಲಸ ಹಂಚಿಕೆಯೊಂದಿಗೆ ರಾಜ್ಯಗಳು ಕನಿಷ್ಠ 125 ದಿನಗಳ ಕೆಲಸ ಕೊಡಬೇಕು. ಸಾಮರ್ಥ್ಯ ಇದ್ದರೆ ಹೆಚ್ಚು ದಿನ ನೀಡಬಹುದು. 15 ದಿನಗಳಲ್ಲಿ ಕೆಲಸ ಸಿಗದಿದ್ದರೆ, ಭತ್ಯೆ ಕೊಡಲಾಗುತ್ತದೆ. ಈ ಕಾಯ್ದೆಯ ಮೂಲಕ ಕಾರ್ಮಿಕರಿಗೆ ಹೆಚ್ಚು ಶಕ್ತಿ ನೀಡುವುದು ಸರ್ಕಾರದ ಉದ್ದೇಶ ಎಂದರು.

ಶಾಸಕರಾದ ಎಸ್.ಎನ್.ಚನ್ನಬಸಪ್ಪ, ಡಾ.ಧನಂಜಯ ಸರ್ಜಿ ಇದ್ದರು.

ಕೃಷಿಗೆ ಅನುಕೂಲ

ನೂತನ ಕಾಯ್ದೆ ಅಡಿ ಕೃಷಿ ಋತುವಿನಲ್ಲಿ ಕಾರ್ಮಿಕರಿಗೆ 60 ದಿನಗಳ ವಿರಾಮ ಕಡ್ಡಾಯವಾಗಿದೆ. ಇದರಿಂದ ರೈತರು ತಮ್ಮ ವೈಯಕ್ತಿಕ ಕೃಷಿ ಕಾರ್ಯಗಳನ್ನು ಮಾಡಿಕೊಳ್ಳಲು ಸಹಾಯವಾಗಲಿದೆ. ಈ 60 ದಿನದ ವಿರಾಮ ಅವಧಿ ಯಾವಾಗ ಇರಬೇಕು ಎನ್ನುವುದನ್ನು ಆಯಾ ಪ್ರದೇಶದ ಬಿತ್ತನೆ ಅಥವಾ ಕೊಯ್ದು ಅವಧಿ ನೋಡಿಕೊಂಡು ಆಯಾ ರಾಜ್ಯ ಸರ್ಕಾರಗಳು ನಿರ್ಧರಿಸಲಿವೆ. ಪೂರೈಕೆ ಆಧಾರಿತ ಕೆಲಸ ಹಂಚಿಕೆ – ಕಾರ್ಮಿಕರಿಗೆ ಹೆಚ್ಚು ಶಕ್ತಿ ನೀಡಲಾಗುತ್ತಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.

📢 ನಿಮ್ಮೂರ ಸುದ್ದಿಗಳನ್ನು ಇಮೇಲ್ ಮಾಡಿ

shivamoggaherald@gmail.com ಅಥವಾ ವಾಟ್ಸಾಪ್ ಸಂಖ್ಯೆಗೆ ಕಳುಹಿಸಿ ಕೊಡಿ.

📞 9113834502

ನೀವು ಇನ್ನೂ 'ಶಿವಮೊಗ್ಗ ಹೆರಾಲ್ಡ್' ವಾಟ್ಸಾಪ್ ಗುಂಪು ಸೇರಿಲ್ವ?

✅ ಈಗಲೇ ವಾಟ್ಸಾಪ್ ಗುಂಪು ಸೇರಿ

'Facebook' ನಲ್ಲಿ ಸುದ್ದಿ ಓದಲು ಈ ಲಿಂಕ್ ಕ್ಲಿಕ್ ಮಾಡಿ

👍 Facebook ನಲ್ಲಿ ಫಾಲೋ ಮಾಡಿ
Share
Written by
Shivamogga herald

'ಮಾಧ್ಯಮಗಳು ಸುಳ್ಳು ಸುದ್ದಿ ನಿಪುಣತೆಯಲ್ಲಿ ಮುಂಚೂಣಿಯಲ್ಲಿವೆ.' ಪತ್ರಕರ್ತರು ಪೂರಕ ಮಾಹಿತಿಯನ್ನು ಸಂಪಾದಿಸದೆ, ಅರೆಬರೆ ಬೆಂದ ಸುದ್ದಿಯ ಮಾಹಿತಿಯನ್ನು ಸಮಾಜಕ್ಕೆ ಹಂಚುವ ಮೂಲಕ ತಪ್ಪು ಸಂದೇಶ ನೀಡುತ್ತಿದ್ದಾರೆ. ಇದು ಸರಿಯಾದ ನಿಲುವಲ್ಲ'- ಹೀಗೊಂದು ಅಪವಾದ ಪತ್ರಕರ್ತರು ಹಾಗೂ ಪತ್ರಿಕೋದ್ಯಮದ ಮೇಲಿದೆ. ಆದ್ದರಿಂದ, ಇಲ್ಲಿ ನಮ್ಮ ಸ್ವಂತ ಅಭಿಪ್ರಾಯಗಳಿಗೆ ಸ್ಥಾನ ನೀಡಲು ಇಚ್ಛಿಸುವುದಿಲ್ಲ. ಓದುಗರಿಗೆ ಸತ್ಯ ಹಾಗೂ ನಿಖರತೆಯ ಸುದ್ದಿಯೊಂದಿಗೆ ಸುದ್ದಿಯಾಗಿ ಮಾತ್ರ ಕೊಡಲು ಬಯಸುತ್ತೇವೆ. ಇದೊಂದು ಮೈಲಿ ಗಲ್ಲು ಸಮಾಜವನ್ನು ಎಚ್ಚರಿಸುವ ಹಾಗೂ ಸಮ ಸಮಾಜ ಕಟ್ಟುವ ಕಾರ್ಯಕ್ಕೆ ಅಡಿಪಾಯ ಆಗಲಿದೆ ಎನ್ನುವ ವಿಶ್ವಾಸದೊಂದಿಗೆ 'ಶಿವಮೊಗ್ಗ ಹೆರಾಲ್ಡ್' ಡಿಜಿಟಲ್ ಮಾಧ್ಯಮ ಕಟ್ಟಿದ್ದೇವೆ. ಸ್ಥಳೀಯ ಸುದ್ದಿಗಳಿಗೆ ನಮ್ಮ ಮೊದಲ ಆದ್ಯತೆ. ಮಾಹಿತಿ ಹಾಗೂ ಸಲಹೆಗೆ ದೂರವಾಣಿ/ ವಾಟ್ಸಾಪ್ ಸಂಖ್ಯೆ: 9113834502, 8197788460 ಸಂಪರ್ಕಿಸಬಹುದು.

Leave a comment

Leave a Reply

Your email address will not be published. Required fields are marked *